ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯ ಪೊಲೀಸ್ ಭದ್ರತೆ ವಾಪಾಸು ಪಡೆಯುವಂತೆ ಮನವಿ

ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಒದಗಿಸಿದ ಭದ್ರತಾ ಸಿಬ್ಬಂದಿಗಳನ್ನು ಶೀಘ್ರವಾಗಿ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಮನವಿ ಮಾಡಿತು.

ಕ್ಷುಲ್ಲಕ ವಿಚಾರಕ್ಕಾಗಿ ಉಡುಪಿಯ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಬಂದು ಘೋಷಣೆ ಕೂಗಿದ ಮಾತ್ರಕ್ಕೆ ಕಾಂಗ್ರೆಸ್ ಕಛೇರಿಗಾಗಲಿ ಅಥವಾ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರಿಗಾಗಲಿ ಯಾವುದ ಭೀತಿ ತಲೆದೋರಿಲ್ಲ.

ಮುನ್ನೆಚ್ಚರಿಕೆಯ ಕಾರಣದಿಂದ ಉಡುಪಿ ಪೊಲೀಸರು ಉಡುಪಿ ಜಿಲ್ಲಾ ಕಾಂಗ್ರೆಸ್‌ ಕಛೇರಿಗೆ ಪೊಲೀಸ್ ಭದ್ರತೆಯನ್ನು ಒದಗಿಸಿದ್ದನ್ನು ನಾವು ಧನ್ಯತಾ ಪೂರ್ಣವಾಗಿ ಸ್ವೀಕರಿಸುವದರ ಜೊತೆ ಕಛೇರಿಗೆ ಭದ್ರತೆ ಒದಗಿಸಿದ ಪೊಲೀಸ್ ಇಲಾಖೆಗೆ ಧನ್ಯವಾದ ಸಲ್ಲಿಸುತ್ತೇವೆ.

ಆದರೂ ಜನರ ಭದ್ರತೆಗೆ ಹಾಗೂ ಸುವ್ಯವಸ್ತೆಗೆ ಮೀಸಲಿರುವ ಪೊಲೀಸರನ್ನು ಯಾವುದೋ ಕಿಡಿಗೇಡಿಗಳ ದುರ್ವತ್ರನೆಯನ್ನು ಪರಿಗಣಿಸಿ, ಕಾಂಗ್ರೆಸ್ ಪಕ್ಷದ ಕಛೇರಿಗೆ ಭದ್ರತೆಯ ನೆಪದಲ್ಲಿ ಅನಾವಶ್ಯಕವಾಗಿ ಉಪಯೋಗಿಸುವುದು ನಾವು ಜನರ ತೆರಿಗೆ ಹಣವನ್ನು ದುರುಪಯೋಗ ಮಾಡಿಕೊಂಡಂತ ಹಾಗಾಗಿ ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಟರು ಕಾಂಗ್ರೆಸ್ ಪಕ್ಷದ ಕಛೇರಿಗೆ ನೀಡಿದ ಎಂದು ಭದ್ರತಾ ಸಿಬಂದಿಗಳನ್ನು ಶೀಘ್ರವಾಗಿ ತೆರವು ಮಾಡಿಸಬೇಕು ಹಾಗೂ ಅಂತಹ ಸಂದರ್ಭ ಬಂದಾಗ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ರಕ್ಷಣೆಗೆ ಹಾಗೂ ಕಾಂಗ್ರೆಸ್‌ ಕಛೇರಿಯ ಭದ್ರತೆಗೆ ತಮ್ಮ ಜೀವ ಪಣ ಇಟ್ಟು ಕೆಲವು ವಿಕೃತ ಶಕ್ತಿಗಳ ವಿರುದ್ಧ ಹೋರಾಡಲು ಸಿದ್ಧರಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಎಂ ಏ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸದಾಶಿವ ಪೂಜಾರಿ, ಪ್ರಚಾರ ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮಮತಾ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಕಡೇಕಾರ್ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಸುಕನ್ಯಾ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾದ ಸತೀಶ್ ಕುಮಾರ್ ಮಂಚಿ, ಸಾಯಿರಾಜ್ ಕಿದಿಯೂರು, ಭರತ್ ಮಣಿಪಾಲ್, ಪ್ರಮೀಳಾ ಸುವರ್ಣ, ಶಾಲಿನಿ ಪುರಂದರ್ ಸಾಲ್ಯಾನ್, ಗಣೇಶ್, ನಾರಾಯಣ್ ಕುಂದರ್, ಹರೀಶ್ ಕಿಣಿ, ನರಸಿಂಹಮೂರ್ತಿ, ಸತೀಶ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಹಮ್ಮದ್, ಸಂಜಯ್ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply