ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು.

    13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡು, 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಘೋಷಿಸಿದರು.

    ಪಕ್ಷೇತರ ಅಭ್ಯರ್ಥಿಗಳಾದ ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ .ಸುರೇಶ್ ಪೂಜಾರಿ ಅವರ ನಾಮಪತ್ರಗಳು ತಿರಸ್ಕಾರಗೊಂಡಿವೆ.

     ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಅವರ ನಾಮಪತ್ರಗಳು ಕ್ರಮಬದ್ಧವಾಗಿರುತ್ತವೆ.  

   ಪರಿಶೀಲನಾ ಸಭೆಯಲ್ಲಿ ಚುನಾವಣಾ ವೀಕ್ಷಕ ಹಿತೇಶ್ ಕೆ. ಕೋಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಏಜೆಂಟರುಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply