ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಸರಕಾರದ ನಿರ್ಧಾರ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ಬಗ್ಗೆ ರಾಜ್ಯ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯ ಸ್ವಾಗತಾರ್ಹ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಈ ಬಗ್ಗೆ ಮೊದಲ ಹಂತದಲ್ಲಿ ರೂ.15 ಕೋಟಿ ಅನುದಾನವನ್ನು ಮಂಜೂರು ಮಾಡಿರುವ ರಾಜ್ಯ ಸರಕಾರದ ದಿಟ್ಟ ಕ್ರಮ ಈಗಾಗಲೇ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಅಧಿನಿಯಮಕ್ಕೆ ಪೂರಕ ವೆನಿಸಲಿದೆ.

ಮನುಕುಲದ ನಿತ್ಯ ಜೀವನಕ್ಕೆ ವರದಾನವಾಗಿರುವ ಗೋವಿನ ಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಈ ಸಕಾಲಿಕ ನಿರ್ಣಯದಿಂದ ಅತೀ ಶೀಘ್ರವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಅಸ್ತಿತ್ವಕ್ಕೆ ಬರುವ ಮೂಲಕ ರಾಜ್ಯದ ಸುಭಿಕ್ಷತೆಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply