ಹೊಸ ಪಕ್ಷದ ಹೆಸರು ಘೋಷಿಸಿದ ಜನಾರ್ದನ ರೆಡ್ಡಿ!

ಬೆಂಗಳೂರಿನ ಬಸವೇಶ್ವರ ಸರ್ಕಲ್​​ ಬಳಿಯ ಪಾರಿಜಾತ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ತಮ್ಮ ಹೊಸ ಪಕ್ಷಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ಹೆಸರಿಟ್ಟಿದ್ದಾರೆ. ಅಟಲ್​ ಬಿಹಾರಿ ವಾಜಪೇಯಿ ಜನ್ಮ ದಿನವಾದ ಇಂದು ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪನೆ ಮಾಡುತ್ತಿದ್ದೇನೆ ಎಂದಿದ್ದಾರೆ.

 ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲು ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಈ ನಡುವೆ ಮಾಜಿ ಸಚಿವ ಹಾಗೂ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡುತ್ತಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇಂದು ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ಬಸವೇಶ್ವರ ಸರ್ಕಲ್​​ ಬಳಿಯ ಪಾರಿಜಾತ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ತಮ್ಮ ಹೊಸ ಪಕ್ಷಕ್ಕೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ಹೆಸರಿಟ್ಟಿದ್ದಾರೆ. ಅಟಲ್​ ಬಿಹಾರಿ ವಾಜಪೇಯಿ ಜನ್ಮ ದಿನವಾದ ಇಂದು ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪನೆ ಮಾಡುತ್ತಿದ್ದೇನೆ. ಜಾತಿ – ಜಾತಿ ನಡುವೆ ರಾಜಕೀಯವನ್ನು ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವವರ ನಡುವೆ ನಾನು ಬಸವಣ್ಣರ ತತ್ವವನ್ನು ಪಾಲಿಸಿಕೊಂಡು ಈ ಪಕ್ಷವನ್ನು ಸ್ಥಾಪನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಸವಣ್ಣ ಜಾತಿ ಮತ ಭೇದಗಳನ್ನು ಮರೆತು ಸಮಾಜದಲ್ಲಿ ಜೀವನ ಸಾಗಿಸಬೇಕು ಅಂತಾ ಹೇಳಿದ್ದರು. ಇದೇ ನಮ್ಮ ಪಕ್ಷದ ಸಿದ್ಧಾಂತವಾಗಿದೆ. ಇದೇ ತತ್ವವನ್ನು ಇಟ್ಟುಕೊಂಡು ನಾನು ರಾಜ್ಯದ ಅಭಿವೃದ್ಧಿಯನ್ನು ಮಾಡಬೇಕು ಎಂದುಕೊಂಡಿದ್ದೇನೆ. ಅನೇಕರು ನಾನು ಹೊಸ ಪಕ್ಷ ಸ್ಥಾಪನೆ ಮಾಡೋದಿಲ್ಲ, ಬಿಜೆಪಿಯೊಂದಿಗೆ ನನ್ನ ಸಂಬಂಧ ಮುಂದುವರಿಯುತ್ತದೆ ಎಂದು ಭಾವಿಸಿದ್ದರು. ಆದರೆ ಇದು ಇಂದು ಹುಸಿಯಾಗಿದೆ. ನನಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ನನ್ನದೇ ಆದ ಹೊಸ ಪಕ್ಷದೊಂದಿಗೆ ನಾನು ಸಾರ್ವಜನಿಕ ಜೀವನಕ್ಕೆ ಮರು ಪ್ರವೇಶ ಮಾಡುತ್ತಿದ್ದೇನೆ. ಯಾವುದೇ ಜಾತಿ – ಮತವಿಲ್ಲದ ರಾಜ್ಯವನ್ನು ನಿರ್ಮಾಣ ಮಾಡುವುದೇ ನಮ್ಮ ಗುರಿ ಎಂದು ಹೇಳಿದ್ದಾರೆ.

 
 
 
 
 
 
 
 
 

Leave a Reply