ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿದರು. ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪಕ್ಷದ ನಿಕಟಪೂರ್ವ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ಪಕ್ಷದ ಬಾವುಟ ನೀಡುವ ಮೂಲಕ ಬರಮಾಡಿಕೊಂಡರು.

ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಎಚ್. ಕೆ. ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡರು.

ಜೆಡಿಎಸ್ ಪಕ್ಷದ ಕಚೇರಿ ಜೆ. ಪಿ. ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಸಿ. ಎಂ. ಇಬ್ರಾಹಿಂ ಪಕ್ಷ ಸೇರಿದರು. ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ಪಕ್ಷ ತೊರೆದಿದ್ದ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.

 
 
 
 
 
 
 
 
 
 
 

Leave a Reply