ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ

ಕಾಪು : ಪುರಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪುರಸಭಾ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಮುಂದಿನ ಚುನಾವಣೆಯನ್ನು ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. 

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಾ ಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ‌ ಶೆಟ್ಟಿ, ಕಾಪು ಪುರಸಭಾ ಉಸ್ತುವಾರಿ ಮಾಲಿನಿ ಶೆಟ್ಟಿ, ಬೂತ್ ಅಧ್ಯಕ್ಷರುಗಳು, ಪುರಸಭಾ ಮಾಜಿ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

 
 
 
 
 
 
 
 
 
 
 

Leave a Reply