ಕೊರೋನಾ ಭಯ  :ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ?

ಬೆಂಗಳೂರು: ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ವಿಧಾನಸಭೆ ಚುನಾವಣೆ ಎದುರಿಸಲು ಸಜ್ಜಾಗಿ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬೊಮ್ಮಾಯಿ ಪೊಲೀಸ್ ಇಲಾಖೆಗೆ ರವಾನಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಸಕ್ತ ವಿಧಾನಸಭೆಯ ಅವಧಿ ಮೇ ತಿಂಗಳ ಎರಡನೆ ವಾರದ ತನಕ ಇದ್ದು, ಸಾಮಾನ್ಯವಾಗಿ ಎಪ್ರಿಲ್ 20 ಅಥವಾ ಮೇ ತಿಂಗಳ ಮೊದಲ ವಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇದೀಗ ಕೊರೋನಾ ಭೀತಿ ಕಾಡುತ್ತಿರುವುದರಿಂದ ಅವಧಿ ಪೂರ್ವ ಚುನಾವಣೆ ಬಗ್ಗೆ ಮಾತು ಕೇಳಿ ಬರುತ್ತಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply