ಸಿಂಪಲ್ ಶ್ರೀನಿವಾಸರಿಗೆ ಮತ್ತೆ ಒಲಿದ ಸಚಿವ ಸ್ಥಾನ

ಕರಾವಳಿ ಭಾಗದ ಪ್ರಭಾವಿ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದು ಬಂದಿದೆ. ವಿಧಾನ ಪರಿಷತ್‌ ಕೋಟಾದಿಂದ ಬೊಮ್ಮಾಯಿ ಸಂಪುಟ ಸೇರಿದ ಕರಾವಳಿ ನಾಯಕರು ಇವರು.
 
ಹಿಂದುಳಿದ ಬಿಲ್ಲವ ಸಮುದಾಯಕ್ಕೆ ಸೇರಿದ ಕೋಟ ಶ್ರೀನಿವಾಸ ಪೂಜಾರಿ ಪಕ್ಷದಲ್ಲಿ ತಳಮಟ್ಟದಿಂದ ಬೆಳೆದು ಬಂದವರು. ಪಕ್ಷ, ಸಂಘ ಪರಿವಾರಕ್ಕೆ ನಿಷ್ಠರು, ಅಪಾರವಾದ ಜನಪರ ಕಾಳಜಿ ಹೊಂದಿರುವ ಕೆಲವು ನಾಯಕರಲ್ಲಿ ಒಬ್ಬರು.
 
ಮೂರು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಪರಿಷತ್ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದಾರೆ. ಈ ಹಿಂದೆ   ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಜರಾಯಿ, ಬಂದರು ಮತ್ತು ಒಳನಾಡು ಖಾತೆಯ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿಡಾ ಅನುಭವ ಹೊಂದಿದ್ದಾರೆ
 

ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲ ವೃತ್ತಿ ಕೃಷಿ. ಉಡುಪಿ ಜಿಲ್ಲೆಯ ಕೋಟದ ಬಡ ಕುಟುಂಬದಲ್ಲಿ ಜನಿಸಿದ ಅವರು, ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಮುನ್ನ ಛಾಯಾಗ್ರಾಹಕರಾಗಿಯೂ ಕೆಲಸ ಮಾಡಿದ್ದಾರೆ.

ಗ್ರಾಮ ಪಂಚಾಯತ್ ಸದಸ್ಯರಾಗಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ತಳಮಟ್ಟದಿಂದ ವಿವಿಧ ಹುದ್ದೆಗಳನ್ನು ಪಡೆದಿದ್ದಾರೆ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಚಿವ ಸ್ಥಾನ ಒಲಿದು ಬಂದಿದೆ.

ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭೆ ಚುನಾವಣಾ ಕಣಕ್ಕಿಳಿದು ಕಡಿಮೆ ಮತಗಳ ಅಂತರದಲ್ಲಿ ಸೋಲುಂಡವರು. ಪಕ್ಷದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

 
 
 
 
 
 
 
 
 
 
 

1 COMMENT

  1. ತುಂಬಾ ಅನ್ಯಾಯ.. ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಸಚಿವ ಸ್ಥಾನ ಕೊಡಲೇ ಬೇಕಿತ್ತು.. ತುಂಬಾ ಅನ್ಯಾಯ.. ಕೋಟಿಗೆ ಈ ಸಲ ಸ್ಥಾನ ಕೊಡಬಾರದಿತ್ತು. ಕುಂದಾಪುರ ಕ್ಷೇತ್ರ ಮುಂದಿನ ಚುನಾವಣೆಯಲ್ಲಿ ಖಂಡಿತ ಹಿನ್ನಡೆ ಸಾಧಿಸಲಿದೆ..shame shame BJP

Leave a Reply