Janardhan Kodavoor/ Team KaravaliXpress
26 C
Udupi
Thursday, April 22, 2021

ಸಚಿವ ಕೋಟ ರಿಂದ ಯೋಗಿ ಆದಿತ್ಯನಾಥರ ಭೇಟಿ 

ಮಂಗಳೂರು: ಕೇರಳದ ಕಾಸರಗೋಡಿಗೆ ಚುನಾವಣೆಯ ಪ್ರಚಾರ ನಿಮಿತ್ತ ಆಗಮಿಸಿದ್ದ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ಮಾಡಿದರು.

 ಈ ವೇಳೆ ಉತ್ತರಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿನಿವಾಸ ಒಂದನ್ನು ನಿರ್ಮಾಣ ಮಾಡಲು ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಈ ಹಿಂದೆ ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಕೇಳಿಕೊಂಡರು.

ಉತ್ತರ ಪ್ರದೇಶದ ಸರ್ಕಾರ, ಕರ್ನಾಟಕದ ಯಾತ್ರಿ ನಿವಾಸಕ್ಕಾಗಿ ಶೀಘ್ರದಲ್ಲಿ ಭೂಮಿಯ ಮಂಜೂರು ಮಾಡಿದರೆ ಅದರ ನಿವಾಸ ನಿರ್ಮಾಣಕ್ಕೆ ಅನುಕೂಲ ಆಗುವುದಾಗಿ ಸಚಿವ ಕೋಟ ಯೋಗಿ ಆದಿತ್ಯನಾಥರಲ್ಲಿ ತಿಳಿಸಿದರು.

ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥರು, ಕೂಡಲೇ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಟ್ಟು ದೇವಳದಲ್ಲಿ ರಾಘವನ ಜನನ

ಪಲಿಮಾರು ಮಠ ಪರಂಪರೆಯ ರಾಮ ನವಮಿಯ ಆಚರಣಾ *ಇತಿಹಾಸದಲ್ಲೇ ಮೊದಲ ಬಾರಿಗೆ* ಮಟ್ಟು ದೇವಳದಲ್ಲಿ ಯತಿದ್ವಯರ ಆಶೀರ್ವಾದದೊಂದಿಗೆ *ಶ್ರೀರಾಮ ದೇವರ ರಥೋತ್ಸವ* ಬಹು ವಿಜ್ರಂಭಣೆಯಿಂದ ಜರುಗಿತು. ಈ ಪರ್ವ ಕಾಲದಲ್ಲಿ *ದೇವಳದ ಹಸುವು ಗಂಡು...

​ ​ಜಿಲ್ಲೆಯಲ್ಲಿ ಹೆಚ್ಚು ಕೋವಿಡ್ ಟೆಸ್ಟ್ ನೆಡೆಸಿ, ಸೋಂಕಿತರಿಗೆ ಕೂಡಲೇ ಚಿಕಿತ್ಸೆ ನೀಡಿ :​ ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ​: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ​ಪರೀಕ್ಷೆಗಳನ್ನು ನೆಡೆಸಿ, ತ್ವರಿತವಾಗಿ​ ಸೋಂಕಿತರನ್ನು ಪತ್ತೆ ಹಚ್ಚಿ, ಕೂಡಲೇ ಅವರಿಗೆ ಚಿಕಿತ್ಸೆ ಆರಂಬಿಸುವುದರ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ​ ಹರಡುವುದನ್ನು ನಿಯಂತ್ರಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು , ನಿಲರ್ಕ್ಷಿಸದರೆ...

ಉಡುಪಿ: ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕ ವಿಚಾರ: ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮ ಸಹೋದರರಿಂದಲೇ ಆಕ್ಷೇಪ!

ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದಲೇ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶ ರಿಂದ ಘೋಷಣೆಯಾಗಿದ್ದು ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ...

ವಾರಾಂತ್ಯದಲ್ಲಿ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕು – ರಘುಪತಿ ಭಟ್ ಆಗ್ರಹ

ಉಡುಪಿ: ರಾಜ್ಯದಲ್ಲಿ ವಾರಾಂತ್ಯ ಸಂಪೂರ್ಣ ಕರ್ಫ್ಯೂ ಜಾರಿಗೊಳಿಸಿದ ದಿನ ಈಗಾಗಲೇ ನಿಗದಿಪಡಿಸಿದ್ದ ಮದುವೆ ಇನ್ನಿತರ ಕಾರ್ಯಕ್ರಮಗಳಿಗೆ ಜನ ನಿಗದಿಪಡಿಸಿದ ದಿನದಂದೆ ಅವಕಾಶ ಕಲ್ಪಿಸುವಂತೆ ಶಾಸಕ ರಘುಪತಿ ಭಟ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಕೋವಿಡ್ - 19...

ಶೀರೂರು ಮಠಕ್ಕೆ ನೂತನ ಉತ್ತರಾಧಿಕಾರಿ​ಯಾಗಿ ​ಅನಿರುದ್ದ ಸರಳತ್ತಾಯ​ ​ಆಯ್ಕೆ

ಉಡುಪಿ: 16ವರ್ಷ ವಯಸ್ಸಿನ ಅನಿರುದ್ದ ​​​​ಸರಳತ್ತಾಯ​ ​ಎಂಬವರನ್ನು ಉಡುಪಿ ಅಷ್ಠ ಮಠಗಳಲ್ಲೊಂದಾದ ಶಿರೂರು ಮಠದ 31 ನೇಯ ಪೀಠಾಧಿಪತಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಸೋದೆ ಮಠದ ​ಶ್ರೀಶ್ರೀ  ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.ಅವರು ಮಂಗಳವಾರ ಹಿರಿಯಡ್ಕ ಬಳಿಯ...
error: Content is protected !!