ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ 6 ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ

 ದಾವಣಗೆರೆ: ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಆರು ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಈ ವಿಚಾರವಾಗಿ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಣಗವಾಡಿ ವೀರೇಶ್ ಮಾಹಿತಿ ನೀಡಿದ್ದಾರೆ. ಮಾಡಾಳ್ ಮಲ್ಲಿಕಾರ್ಜುನ ಈಗಾಗಲೇ ಸ್ವಾಭಿಮಾನಿ ಹೆಸರಿನಲ್ಲಿ ಸಭೆ‌ ನಡೆಸಿದ್ದು ಚನ್ನಗಿರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಪರಿಗಣಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಪಕ್ಷದ ಶಿಸ್ತು ಸಮಿತಿಗೆ ಶಿಫಾರಸು ಮಾಡಲಾಗಿದೆ ಎಂದು ವೀರೇಶ್ ಮಾಹಿತಿ ನೀಡಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಏಪ್ರಿಲ್ 16ರಂದು ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ನಡೆದ ಅಭಿಮಾನಿಗಳ ಸ್ವಾಭಿಮಾನದ ಸಂಕಲ್ಪ ಸಭೆಯಲ್ಲಿ ಮಲ್ಲಿಕಾರ್ಜುನ ತೀರ್ಮಾನಿಸಿದ್ದರು. “ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಡ ಹೆಚ್ಚಾಗಿದೆ. ನಮ್ಮ ಕೆಲ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿದ್ದರು. ಅಭಿಮಾನಿಗಳ ಒತ್ತಡ ಹೆಚ್ಚಾಗಿದೆ‌. ಕೆಲವರು ವಿಷ ಕುಡಿಯಲು ಹೋಗಿದ್ದರು. ಇದೇ ಕಾರಣಕ್ಕೆ ನಾನು ಸ್ಪರ್ಧೆಗೆ ಮುಂದಾಗಿದ್ದೇನೆ” ಎಂದು ಹೇಳಿದ್ದರು.

 
 
 
 
 
 
 
 
 
 
 

Leave a Reply