ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರ ಖಚಿತ

ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಭಾಗವಾಗಿದ್ದ ಶಿವಸೇನೆಯಲ್ಲಿ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಭಾರೀ ಬಂಡಾಯ, ಬುಧವಾರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಯಶಸ್ವಿಯಾಗಿದೆ.

 ಸಿಎಂ ಉದ್ಧವ್‌ ಠಾಕ್ರೆಗೆ ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲ ಕೋಶಿಯಾರಿ ಬುಧವಾರ ಬೆಳಗ್ಗೆಯಷ್ಟೇ ನೀಡಿದ್ದ ಆದೇಶಕ್ಕೆ ತಡೆ ನೀಡಲು ಬುಧವಾರ ರಾತ್ರಿ ಸುಪ್ರೀಂಕೋರ್ಚ್‌ ನಿರಾಕರಿಸಿದ ಬೆನ್ನಲ್ಲೇ, ವಿಶ್ವಾಸಮತ ಕಳೆದುಕೊಂಡಿದ್ದ ಉದ್ಧವ್‌ ಠಾಕ್ರೆ ಅನ್ಯಮಾರ್ಗವಿಲ್ಲದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಎರಡೂವರೆ ಅಧಿಕಾರ ನಡೆಸಿದ್ದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಹೀಗಾಗಿ ಎರಡು ವಾರಗಳಿಂದ ಮೂರು ರಾಜ್ಯಗಳಿಗೆ ಹರಡಿಕೊಂಡಿದ್ದ ಹೈಡ್ರಾಮಕ್ಕೆ ಕೊನೆಗೂ ತೆರೆ ಬಿದ್ದಿದೆ.

ಮಹಾರಾಷ್ಟ್ರದ ಮುಂದಿನ ಬೆಳವಣಿಗೆಗಳು, ವಿಶ್ವಾಸಮತ ಯಾಚನೆಗೆ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಸೇನೆ ವಿಪ್‌ ಸಲ್ಲಿಸಿರುವ ಅರ್ಜಿಯ ತೀರ್ಪಿಗೆ ಒಳಪಟ್ಟಿರಲಿದೆ ಎಂದು ಸುಪ್ರೀಂಕೋರ್ಚ್‌ ಸ್ಪಷ್ಟಪಡಿಸಿದೆಯಾದರೂ, ತಕ್ಷಣಕ್ಕೆ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಗೆ ಯಾವುದೇ ಅಡ್ಡಿ ಇಲ್ಲ. ಹೀಗಾಗಿ ಮುಂದಿನ 50ಕ್ಕೂ ಹೆಚ್ಚು ಶಾಸಕರ ಬೆಂಬಲ ಹೊಂದಿರುವ ಏಕನಾಥ್‌ ಶಿಂಧೆ ಅವರ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದೆ.

 
 
 
 
 
 
 
 
 
 
 

Leave a Reply