ಮಂಗಳೂರು: ಬಾಂಬ್ ಸ್ಪೋಟದ ಹಿಂದಿರುವ ಶಕ್ತಿಗಳನ್ನು ಮಟ್ಟ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ : ನಯನ ಗಣೇಶ್ 

ಕರಾವಳಿ ಪ್ರದೇಶದಲ್ಲಿ ಶಾಂತಿ ಯ ವಾತಾವರಣ ಕೆಡಿಸಲು,ಜನರಲ್ಲಿ ಭಯ ಮೂಡಿಸಲು ಕೆಲವೊಂದು ಶಕ್ತಿಗಳು ಪ್ರಯತ್ನ ಪಡುತ್ತಿದ್ದು, ಇಂತಹ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುವ ಶಕ್ತಿಗಳನ್ನು ಬೇರು ಸಮೇತ ಕಿತ್ತು ಹಾಕುವ ಅವಶ್ಯಕತೆಯಿದೆ. 
 
ನಿನ್ನೆಯ ನಾಗುರಿ ರಿಕ್ಷಾದಲ್ಲಿ ನಡೆದ ಸ್ಪೋಟ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು NIA ಮೂಲಕ ತನಿಖೆ ನಡೆಸಿ ಮತ್ತು ಇದರ ಹಿಂದಿರುವ ಶಕ್ತಿಗಳನ್ನು ಮಟ್ಟಹಾಕುವಂತೆ ರಾಜ್ಯ ಸರ್ಕಾರವನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply