Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ಪ್ರಮೋದ್ ಕೊನೆಗೂ ಬಿಜೆಪಿ ತೆಕ್ಕೆಗೆ..?

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಬಿಜೆಪಿ ಸೇರ್ಪಡೆ ಬಗ್ಗೆ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಪಕ್ಷ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಯಾವಾಗ ಸೇರ್ಪಡೆಯಾಗುತ್ತಾರೆ ಎನ್ನುವುದು ಪಕ್ಷ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಹೇಳಿದರು. 
ಶುಕ್ರವಾರ ‌ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಮೋದ್ ಬಿಜೆಪಿ ಸೇರ್ಪಡೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ವರಿಷ್ಠರಿಗೆ ಸಲ್ಲಿಸಲಾಗಿದೆ. ಮುಂದಿನ ನಿರ್ಧಾರ ಅವರಿಗೆ ಬಿಟ್ಟಿದ್ದು.
 
ಪ್ರಮೋದ್‌ ಬಿಜೆಪಿ ಸೇರ್ಪಡೆಗೆ ಯಾವುದೇ ರೀತಿಯ ಹುದ್ದೆಯ ಕಂಡೀಷನ್‌ ಹಾಕಿಲ್ಲ ಎಂದು ಕುಯಿಲಾಡಿ ತಿಳಿಸಿದರು. ಪಕ್ಷದ ಸಿದ್ದಾಂತ ನಂಬಿ ಬರುವವರಿಗೆ ಪಕ್ಷದ ಗೇಟ್‌ ಯಾವತ್ತೂ ತೆರೆದೇ ಇದೆ. ಯಾವುದೇ ಹುದ್ದೆಯ ನಿರೀಕ್ಷೆಯಿಲ್ಲದೆ ಬರುವ ಇಂಗಿತವನ್ನು ಮಾಜಿ ಸಚಿವ ಪ್ರಮೋದ್ ವ್ಯಕ್ತಪಡಿಸಿದ್ದು, ರಾಜ್ಯಾಧ್ಯಕ್ಷರು ಮತ್ತು ಜಿಲ್ಲಾ ನಾಯಕರು ಸೇರಿಕೊಂಡು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು.
 
ಪ್ರಮೋದ್‌ ಬಿಜೆಪಿಗೆ ಬರುವ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದಲ್ಲಿ ಅದಕ್ಕೆ ರಾಜ್ಯ ವರಿಷ್ಠರು ಸೂಕ್ತ ವ್ಯವಸ್ಥೆ ಮಾಡಲಿದ್ದಾರೆ. ಒಬ್ಬ ವ್ಯಕ್ತಿ ಪಕ್ಷಕ್ಕೆ ಬರುವ ಸಮಯದಲ್ಲಿ ವಿರೋಧಗಳು ಸಹಜ. ಆದರೆ, ಬಳಿಕ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು. ಇದು ಬಿಜೆಪಿ ಸಿದ್ದಾಂತ ಎಂದರು.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!