ಎಲ್ಲರ ಚಿತ್ತ ರಾಷ್ಟ್ರಪತಿ ಹುದ್ದೆಯತ್ತ.. ಲೆಕ್ಕಾಚಾರ ಪ್ರಾರಂಭ

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ಇದೀಗ ಎಲ್ಲರ ಚಿತ್ತ ರಾಷ್ಟ್ರಪತಿ ಚುನಾವಣೆಯತ್ತ ನೆಟ್ಟಿದೆ. ಬರುವ ಜುಲೈ 24ರಂದು ರಾಷ್ಟ್ರಪತಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಮುಂದಿನ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಲೆಕ್ಕಾಚಾರ ಶುರುವಾಗಿದೆ.

ಹಲವು ಬಾರಿ ಸರ್ಕಾರದ ನಿರ್ಧಾರವನ್ನು ರಾಷ್ಟ್ರಪತಿಗಳು ಪ್ರಶ್ನಿಸುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತ ಪಕ್ಷದ ಅಭ್ಯರ್ಥಿ ಸೋತರೆ ಸರ್ಕಾರಕ್ಕೆ ಹಿನ್ನಡೆ ಎಂದಾಗುತ್ತದೆ.

ಯಾವುದೇ ಮಸೂದೆ ಸಂಸತ್ತಿನಲ್ಲಿ ಪಾಸ್ ಆದರೂ ರಾಷ್ಟ್ರಪತಿಗಳು ಅಂಕಿತ ಹಾಕದೇ ಇದ್ದರೆ ಸರ್ಕಾರಕ್ಕೆ ಆದ ದೊಡ್ಡ ಮುಜುಗರ ತರುತ್ತದೆ. ಆದ್ದರಿಂದ ರಾಷ್ಟ್ರಪತಿ ಅಭ್ಯರ್ಥಿಯ ಬಗ್ಗೆ ರಾಜಕೀಯ ಲೆಕ್ಕಾಚಾರಗಳು ಜೋರಾಗಿಯೇ ನಡೆಯುತ್ತವೆ.

ರಾಷ್ಟ್ರಪತಿ ಹುದ್ದೆಯನ್ನು ಏರಬೇಕೆಂದರೆ ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿತ್ತು. ಇದೀಗ ಭರ್ಜರಿ ಜಯಭೇರಿ ಬಾರಿಸಿದ್ದರಿಂದ ರಾಷ್ಟ್ರಪತಿಯ ಹಾದಿ ಸುಗಮವಾಗಿದೆ. ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು.

ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.

75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನವಾಗಿದ್ದು, ಇದೀಗ ಇದರ ಆಧಾರದ ಮೇಲೆಯೂ ಲೆಕ್ಕಾಚಾರ ನಡೆಯುತ್ತಿದೆ.

ವಿಧಾನಪರಿಷತ್‌ ಸದಸ್ಯರನ್ನು ಹೊರತುಪಡಿಸಿ ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಚಲಾಯಿಸಲು ಅವಕಾಶವಿದೆ. ಸದ್ಯ. 543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲು ಅರ್ಹರು.

ಈಗಿನ ನಿಯಮದ ಅನ್ವಯ ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ.

ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ. ಉತ್ತರ ಪ್ರದೇಶದಲ್ಲಿ 403 ಶಾಸಕರಿದ್ದು, ಅವರ ಮತಗಳ ಮೌಲ್ಯ 83,824 ಆಗಲಿದೆ.

80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ.

 
 
 
 
 
 
 
 
 
 
 

Leave a Reply