ರಾಜ್ಯ ಸರಕಾರದಿಂದ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್

ಉಡುಪಿ: ನವರಾತ್ರಿ ಸಂಭ್ರಮದಲ್ಲಿರುವ ರಾಜ್ಯದ ಜನರಿಗೆ ರಾಜ್ಯ ಸರಕಾರ ಕರೆಂಟ್ ಶಾಕ್‌ನಿಂದ ಬಿಸಿ ಮುಟ್ಟಿಸಿದೆ. ಈಗಾಗಲೇ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಸಾಮಾನ್ಯ ಜನರಿಗೆ ರಾಜ್ಯ ಸರಕಾರ ಏಕಾಏಕೀ ವಿದ್ಯುತ್ ದರ ಏರಿಸಿ ಗಾಯದ ಮೇಲೆ ಬರೆ ಏಳೆದಿದೆ. ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ವಿದ್ಯುತ್ ಶುಲ್ಕದ ಹೊರೆ ಬೀಳಲಿದೆ. ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂ‌ನಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದರೂ ಇದೀಗ ಮತ್ತೊಮ್ಮೆ ದರ ಏರಿಸಿದರುವುದು ಖೇದಕರ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ.

ಈಗ ಅಕ್ಟೋಬರ್‍ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು, ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ. ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಈಗಾಗಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ವಿದ್ಯುತ್ ಉತ್ಪಾದನೆ ಉತ್ತಮವಾಗಿದೆ. ಅದರ ಹೊರತಾಗಿಯೂ ವಿದ್ಯುತ್ ಖರೀದಿಗೆ 1244 ಕೋಟಿ ಹೆಚ್ಚಳವಾಗಿದೆ ಎಂಬುವುದು ಅಚ್ಚರಿಯ ಸಂಗತಿ.

ನಮ್ಮ ಉಡುಪಿ ಜಿಲ್ಲೆಯವರೇ ಆದ ಸುನೀಲ್ ಕುಮಾರ್ ಅವರು ಇಂಧನ ಖಾತೆಯ ಸಚಿವರಾಗಿದ್ದಾರೆ. ವಿದ್ಯುತ್ ದರ ಏರಿಸುವ ಬದಲು ಜನಪರ ನಿಲುವು ತಾಳಿ ವಿದ್ಯುತ್ ದರವನ್ನು ತಕ್ಷಣ ಹಿಂಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಗ್ರಹಿಸಿದ್ದಾರೆ.

 
 
 
 
 
 
 
 
 
 
 

Leave a Reply