ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ‌ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ 

ಬಿಜೆಪಿ ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಅಭಿನಂದನೆ

ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗು ವಂತಹ ಎಲ್ಲ ಅಗತ್ಯ‌ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ವತಿಯಿಂದ ಸೋಮವಾರ ಸಿ.ಎಂ. ನಿವಾಸದ ಬಳಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣ ಸ್ವಾಮಿ, ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ‌ ಕಾರ್ಯದರ್ಶಿ ದಿನಕರ ಬಾಬು, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್‌ ನಾಯ್ಕ್, ಎಸ್ಸಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಗೋಪಾಲ ಕಳಂಜಿ,

ಎಸ್ಟಿ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯ್ಕ್,‌ ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಪದಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಮತ್ತು ಪದಾಧಿಕಾರಿ ಗಳು, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯದರ್ಶಿಗಳಾದ ಸುನೀತಾ ನಾಯ್ಕ್, ಗುರುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply