ಮೊಟ್ಟೆ ಹಗರಣದ ಆರೋಪಿ ಜೊಲ್ಲೆಗೆ ಮತ್ತೆ ಸಚಿವೆ ಪದವಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಖಂಡನೆ

ಉಡುಪಿ : ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸರ್ಕಾರದಿಂದ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರ ನಡೆಸಿದ ಆರೋಪಕ್ಕೆ ಒಳಗಾಗಿರುವ ಶಶಿಕಲಾ ಜೊಲ್ಲೆ ಅವರಿಗೆ ಬೊಮ್ಮಾಯಿ ಮಂತ್ರಿಮಂಡಲದಲ್ಲಿ ಪುನಃ:ಸಚಿವ ಸ್ಥಾನ ದೊರಕಿರುವುದು ದುರಾದೃಷ್ಟಕರ.ಸ್ವಚ್ಛ ಹಾಗೂ ಪಾರದರ್ಶಕ ಆಡಳಿತವನ್ನು ರಾಜ್ಯದ ಜನತೆಗೆ ನೀಡುವ ಉದ್ದೇಶವೇ ಬಿಜೆಪಿಗಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆರೋಪಿಸಿದೆ.

ಅಳಿಯ ಅಲ್ಲ ಮಗಳ ಗಂಡ ಎನ್ನುವಂತೆ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಮಾತ್ರ ಬದಲಾವಣೆ ಮಾಡಲಾಗಿದೆ.ಆಡಳಿತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಗೋಚರಿಸುತ್ತಿಲ್ಲ.ಬಿಜೆಪಿಯಲ್ಲಿ ಸ್ವಲ್ಪವಾದರೂ ನೈತಿಕತೆ ಅನ್ನುವುದು ಇದ್ದಿದ್ದರೆ ಶಶಿಕಲಾ ಜೊಲ್ಲೆ ಅವರಿಗೆ ಮಂತ್ರಿಗಿರಿ ಇಂದು ಸಿಗುತ್ತಿರಲಿಲ್ಲ.ಅವರು ನಡೆಸಿದ್ದಾರೆ ಎನ್ನಲಾಗಿದೆ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆ ನಡೆಸಿ,ಆರೋಪ ಸುಳ್ಳೆಂದು ಸಾಬೀತಾದಲ್ಲಿ ಮತ್ತೆ ಸಂಪುಟಕ್ಕೆ ಸೇರಿಸಿಕೊಂಡರೆ ಯಾರೂ ಆಕ್ಷೇಪಿಸುತ್ತಿರಲಿಲ್ಲ.ಆದರೆ ಮಾನ್ಯ ಮುಖ್ಯಮಂತ್ರಿಗಳು ಇದರ ಬಗ್ಗೆ ಒಂದಿನಿತೂ ತಲೆಕೆಡಿಸಿಕೊಳ್ಳದೇ ತೂಕಡಿಸುವವನಿಗೆ ಹಾಸಿಗೆ ಹಾಸಿಕೊಟ್ಟಂತೆ ಇನ್ನಷ್ಟು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಟ್ಟಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಮಹಿಳಾ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ,ಮಾತ್ರವಲ್ಲ,ಶಶಿಕಲಾ ಅವರು ಎಸಗಿರುವ ಭ್ರಷ್ಟಾಚಾರದ ಬಗ್ಗೆ ತಕ್ಷಣ ತನಿಖೆ ನಡೆಸಬೇಕು.ಈ ತನಿಖೆ ಪೂರ್ತಿಯಾಗಿ ತೀರ್ಪು ಹೊರಬರುವ ವರೆಗೆ ಅವರಿಗೆ ನೀಡಲಾಗಿರುವ ಮಂತ್ರಿ ಪದವಿಯನ್ನು ಅಮಾನತು ಗೊಳಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳನ್ನು ಮಹಿಳಾ ಕಾಂಗ್ರೆಸ್ ಒತ್ತಾಯಿಸುತ್ತದೆ ಎಂಬುದಾಗಿ ಗೀತಾ ವಾಗ್ಳೆ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply