ಲೋಕಸಭೆ ಚುನಾವಣೆ: ‘ಗೋಬ್ಯಾಕ್ ಶೋಭಾ’ ಪತ್ರ ಚಳುವಳಿ

ಚಿಕ್ಕಮಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಚರ್ಚೆ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ. ಈ ಬೆಳವಣಿಗೆಯ ಮಧ್ಯೆಯೇ ‘ಗೋಬ್ಯಾಕ್ ಶೋಭಾ’ ಪತ್ರ ಅಭಿಯಾನ ಶುರುವಾಗಿದೆ.

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಮೂರನೇ ಬಾರಿ ಸ್ಪರ್ಧಿಸುವುದಾಗಿ ನಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿರುವ ಬೆನ್ನಲ್ಲೇ ‘ಗೋಬ್ಯಾಕ್  ಶೋಭಾ ಪತ್ರ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರು ಆರಂಭಿಸಿದ್ದಾರೆ. ಚಿಕ್ಕಮಗಳೂರು ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕೆಲ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು ನಗರದ ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಡುವ ಮೂಲಕ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಕೆಲ ಕಾರ್ಯಕರ್ತರು ಒತ್ತಾಯಿಸಿದ್ದಾರೆ. 5000ಕ್ಕೂ ಹೆಚ್ಚು ಪತ್ರ ಗಳನ್ನ ಕಳುಹಿಸಿ ರಾಷ್ಟ್ರ ನಾಯಕರಿಗೆ ಮನವಿ ಹಾಗು ಮಾಹಿತಿ ರವಾನಿಸಿದ್ದಾರೆ ಎಂದು ವರದಿಯಾಗಿದೆ.

ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದರೂ ಕ್ಷೇತ್ರಕ್ಕೆ ಮಹತ್ವದ ಕೊಡುಗೆಯೇನೂ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಬಾರದು. ಹೊಸ ಮುಖಗಳಿಗೆ ಟಿಕೆಟ್ ನೀಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಯಕರ್ತರೇ ಈ ನಡುವೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕಮಾಂಡ್ ಪತ್ರ ರವಾನಿಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

 
 
 
 
 
 
 
 
 
 
 

Leave a Reply