ಎಸ್.ಡಿಪಿ.ಐ, ಸಿಎಫ್.ಐ ಬ್ಯಾನ್ ಮಾಡಲಿ: ಸಿದ್ಧರಾಮಯ್ಯ ಉವಾಚ

ಮಂಗಳೂರು: ಸರಕಾರ ಎಸ್.ಡಿಪಿಐ ಮತ್ತು ಪಿಎಫ್.ಐ ಬ್ಯಾನ್ ಮಾಡುವುದಾದರೆ ಮಾಡಲಿ. ಯಾರು ಬೇಡ ಅಂತಾರೆ? ಕೇಂದ್ರ ಮತ್ತು ರಾಜ್ಯ ಸರಕಾರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರ ಬಿಜೆಪಿ ಕೈಯಲ್ಲೇ ಇದೆ. ನಾವು ಬ್ಯಾನ್ ಮಾಡೋದು ಬೇಡ ಅಂತ ಹೇಳಿದ್ದೇವಾ? ಮಾಡುವುದಾದರೆ ಮಾಡಲಿ ಎಂದರು.

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರುವ ವಿಚಾರ 10- 15 ದಿನಗಳ ಹಿಂದೆಯೇ ತಿಳಿದಿತ್ತು. ಭಾರತ, ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿದ್ದಾರೆ ಎಂಬುದೂ ಸರ್ಕಾರಕ್ಕೆ ಗೊತ್ತಿತ್ತು. ಆಗಲೇ ಆ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇದ್ದುದು ಬೇಜವಾಬ್ದಾರಿತನ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

ಈಗ ಉಕ್ರೇನ್ ನಲ್ಲಿ ನಮ್ಮ ವಿದ್ಯಾರ್ಥಿಗಳು ಬಂಕರ್ ಗಳಲ್ಲಿ, ಬೇರೆ ಬೇರೆ ಕಡೆಗಳಲ್ಲಿ ಸಿಲುಕಿದ್ದಾರೆ. ವಿದ್ಯಾರ್ಥಿಗಳಿರುವ ಪಕ್ಕದಲ್ಲಿಯೇ ಬಾಂಬ್ ಸ್ಪೋಟಿಸುತ್ತಿವೆ. ಈಗ ವಿಮಾನ ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಅದರಿಂದಾಗಿ ವಿದ್ಯಾರ್ಥಿಗಳಿಗೆ ಮರಳಿ ತಾಯ್ನಾಡಿಗೆ ಬರಲೂ ಸಮಸ್ಯೆಯಾಗಿದೆ. ಸರ್ಕಾರ ಇಂಥ ವಿಚಾರದಲ್ಲಿ ಮೈಮರೆಯಬಾರದು.

ಸಿಎಂ ಬೊಮ್ಮಾಯಿ ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆ ಮೂಲಕ ಮಾತುಕತೆ ನಡೆಸಬೇಕು. ತಕ್ಷಣ ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ಅವರ ಪ್ರಯಾಣ ವೆಚ್ಚ ಭರಿಸಿ ತಾಯ್ನಾಡಿಗೆ ಕರೆ ತರುವ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

 
 
 
 
 
 
 
 
 
 
 

Leave a Reply