ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ : ಪ್ರಬುದ್ಧ ರಾಜಕಾರಿಣಿ, ರಾಜ್ಯ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿರುವ ಬಸವರಾಜ ಬೊಮ್ಮಾಯಿಯವರು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ಸಂತಸ ವ್ಯಕ್ತ ಪಡಿಸಿದೆ.

ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ರಾಜಕೀಯ ಮುತ್ಸದ್ಧಿ ಬಸವರಾಜ ಬೊಮ್ಮಾಯಿಯವರು ರಾಜ್ಯದ 30ನೇ ಮುಖ್ಯಮಂತ್ರಿಯಾಗಿರುವ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿಯವರು ಸಾರ್ಥಕ ಜನಪರ ಆಡಳಿತ ನೀಡುವ ಮೂಲಕ ರಾಜ್ಯದ ಮಾದರಿ ಮುಖ್ಯಮಂತ್ರಿಗಳಾಗಿ ಯಶಸ್ಸು ಸಾಧಿಸುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

 
 
 
 
 
 
 
 
 

Leave a Reply