ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ- ವೆರೋನಿಕಾ ಕರ್ನೆಲಿಯೋ

ಸದಾ ಬೇಟಿ ಬಚಾವೊ ಬೇಟಿ ಪಡಾವೊ ಎನ್ನುವ ಬಿಜೆಪಿ ಸರಕಾರಕ್ಕೆ ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಶುಚಿ ಯೋಜನೆಯಡಿ ನೀಡಲಾಗುವ ಸ್ಯಾನಿಟರಿ ನ್ಯಾಪ್ಕಿನ್ ಪೊರೈಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ವಿಚಾರ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವತಿಯಿಂದ ಶುಚಿ ಯೋಜನೆಯಡಿ ನ್ಯಾಪ್ಕಿನ್ ಖರೀದಿಸಿ ವಿತರಿಸುವ ಜವಾಬ್ದಾರಿ ಹೊತ್ತಿದ್ದು ಕಳೆದ 1.5 ವರ್ಷದಿಂದ ನೀಡದೆ ಇರುವುದು ಸರಕಾರದ ನಿರ್ಲಕ್ಷ್ಯತನಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ದೇಶದ ಪ್ರಧಾನಿಯವರು ಮಾತೆತ್ತಿದ್ದರೆ ಮಹಿಳಾ ಸಬಲೀಕರಣ, ವಿದ್ಯಾರ್ಥಿನಿಯರಿಗೆ ಉತ್ತಮ ಶಿಕ್ಷಣದ ಮಾತುಗಳನ್ನು ಆಡುತ್ತಿರುವುದು ಕೇವಲ ಪ್ರಚಾರಕ್ಕಾಗಿ ಸೀಮಿತವಾಗುವಂತೆ ಭಾಸವಾಗುತ್ತಿದೆ. ಕನಿಷ್ಠ ಹದಿಹರೆಯದ ವಿದ್ಯಾರ್ಥಿನಿಯರ ಉತ್ತಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾದ ರಾಜ್ಯ ಸರಕಾರ ಕೇವಲ ಭ್ರಷ್ಠಾಚಾರದಲ್ಲಿ ಮುಳುಗಿದೆ. ನ್ಯಾಪ್ಕಿನ್ ಖರೀದಿ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು ಈ ನಿಟ್ಟಿನಲ್ಲಿ ಸಂಬಂಧಪಟ್ಟ ಖಾತೆಯ ಸಚಿವರು ಕೂಡ ಬೇಜವಬ್ದಾರಿತನ ತೋರುತ್ತಿರುವುದು ಸರಿಯಲ್ಲ. ಇನ್ನಾದರೂ ಸರಕಾರ ಕೂಡಲೇ ಎಚ್ಚೆತ್ತ ವಿದ್ಯಾರ್ಥಿನಿಯರ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 

Leave a Reply