ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ. ಸರ್ಜಿ ಭರ್ಜರಿ ಗೆಲುವು

ವಿಧಾನ ಪರಿಷತ್ ನೈಋತ್ಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಭಾರೀ ಕುತೂಹಲ ಮೂಡಿಸಿದ್ದ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಗುರುವಾರ ರಾತ್ರಿ ವೇಳೆ ಮುಗಿಯಿತು.

ಒಟ್ಟು 66,497 ಮತಗಳು ಚಲಾವಣೆಯಾಗಿದ್ದು ಅದರಲ್ಲಿ 61,382 ಮತಗಳು ಸಿಂದುವಾಗಿದೆ.

ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 37,627 ಮತ ಪಡೆದು ಒಟ್ಟು 6,935 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ನ ಆಯನೂರು ಮಂಜುನಾಥ್ 13,516 ಮತ ಪಡೆದರು. ಪಕ್ಷೇತರರಾಗಿ ಸ್ಪರ್ಧಿಸಿದ್ದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ 7,039 ಮತಗಳಿಗೆ ತೃಪ್ತರಾದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಪಿ. ದಿನೇಶ್ 2,518 ಮತ ಪಡೆದಿದ್ದಾರೆ.

 
 
 
 
 
 
 
 
 
 
 

Leave a Reply