ಯಶ್ ಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಗುರುವಾರ  12 ಸಾವಿರಕ್ಕೂ ಅಧಿಕ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು. ಇದಕ್ಕೆ ಮೊದಲು ಅವರು ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಉಡುಪಿ ಕೃಷ್ಣ ಮಠಕ್ಕೆ ತೆರಳಿ, ಕೃಷ್ಣ ದರ್ಶನ ಪಡೆದು, ವಿಶೇಷ ಪ್ರಾರ್ಥನೆ ಮತ್ತು ಗೋಪೂಜೆ ಸಲ್ಲಿಸಿದರು. ಕಡಿಯಾಳಿ ಮಹಿಷ ಮರ್ಧಿನಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಿಜೆಪಿಯ ಹಿರಿಯ ನಾಯಕ ಸೋಮಶೇಖರ್ ಭಟ್ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ಪಾದಯಾತ್ರೆ ನಡುವೆ ಗ್ರಾಮ ದೇವತೆ ಬನ್ನಂಜೆ ಮಹಾಲಿಂಗೇಶ್ವರ ದೇವರ ದರ್ಶನ ಪಡೆದರು.
ನಂತರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಾಜಪೇಯಿ ಮತ್ತು ಡಾ.ವಿ.ಎಸ್.ಆಚಾರ್ಯರ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಂತರ  12ಸಾವಿರಕ್ಕೂ ಅಧಿಕ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ನಗರ ಅಧ್ಯಕ್ಷ ಮಹೇಶ್ ಠಾಕೂರ್, ನಗರಾಭಿವ್ರದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಕಲ್ಮಾಡಿ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply