ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭಿಸುವ ಮೂಲಕ ಭಯದ ವಾತಾವರಣ~ ಶಾಸಕ ಯಶಪಾಲ್ ಸುವರ್ಣ

ಉಡುಪಿ: ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ (ಎಸಿಡಬ್ಲ್ಯೂ) ಆರಂಭಿಸುವ ಮೂಲಕ ಭಯದ ವಾತಾವರಣ ನಿಯಂತ್ರಣಕ್ಕೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆರೋಪಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರಾವಳಿಗೆ ಅದರಲ್ಲೂ ವಿಶೇಷವಾಗಿ ಮಂಗಳೂರು ಮತ್ತು ಉಡುಪಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಹೊರ ರಾಜ್ಯಗಳಿಂದ ಆಗಮಿಸುತ್ತಾರೆ.

ಮಂಗಳೂರಿನಲ್ಲೂ ಸಾಕಷ್ಟು ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿದ್ದು ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ವ್ಯಾಸಂಗಕ್ಕಾಗಿ ಆಗಮಿಸುತ್ತಾರೆ. ಈ ರೀತಿ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭಿಸುವ ಮೂಲಕ ಅವರಲ್ಲಿ ಭಯದ ವಾತಾವರಣ ಸೃಷ್ಟಿಸಿದಂತಾಗುತ್ತದೆ ಎಂದು ಶಾಸಕ ಯಶಪಾಲ್ ಹೇಳಿದ್ದಾರೆ.

ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪನೆಯ ಸರ್ಕಾರದ ಕಾರ್ಯವನ್ನು ಮೊದಲು ಸ್ವಾಗತಿಸಿದ್ದು ಎಸ್.ಡಿಪಿಐ. ಅದರಿಂದಾಗಿ ನಿರ್ದಿಷ್ಟ ಸಮುದಾಯವೊಂದರ ಓಲೈಕೆಗಾಗಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಇದನ್ನು ಮಾಡಿದೆ ಎಂಬುದು ಗೊತ್ತಾಗುತ್ತದೆ. ತಾನು ಈ ಹಿಂದೆಯೇ ಹೇಳಿದಂತೆ ಎಸ್.ಡಿಪಿಐ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಎಂಬುದು ಮತ್ತೆ ಸಾಬೀತಾಗಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply