ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ರವರಿಗೆ ಅಭಿನಂದನೆ:ಯಶ್ ಪಾಲ್ ಸುವರ್ಣ

ಮೀನುಗಾರರ ಬಹುದಿನಗಳ ಬೇಡಿಕೆ ಡೀಸೆಲ್ ಪಾಯಿಂಟ್ ನಲ್ಲಿಯೇ ಕರ ರಹಿತ ಡಿಸೇಲ್ ವಿತರಣೆಗೆ ಬಜೆಟ್ ನಲ್ಲಿ   ನಿರ್ಧರಿಸುವ ಮೂಲಕ ಮುಖ್ಯಮಂತ್ರಿಗಳು ಮೀನುಗಾರರಿಗೆ  ಆರ್ಥಿಕ ಚೈತನ್ಯ ತುಂಬಿದ್ದಾರೆ. 
ಮೀನು ಮಾರಾಟ ಘಟಕ, ಮತ್ಸ್ಯದರ್ಶಿನಿಗಳ ಸ್ಥಾಪನೆಗೆ 30 ಕೋಟಿ, ಮೀನು ಉತ್ಪನ್ನಗಳ ಸಂಸ್ಕರಣಾ ಕೇಂದ್ರ ಸ್ಥಾಪನೆ, ಮತ್ಸ್ಯ ಸಂಪದ ಯೋಜನೆ ಅನುಷ್ಠಾನಕ್ಕೆ 62 ಕೋಟಿ ಹಾಗೂ ಬಂದರು  ಸಂಪರ್ಕ ರಸ್ತೆಗೆ 100 ಕೋಟಿ ಮೀಸಲಿಡುವ ಮೂಲಕ ರಾಜ್ಯದ ಮೀನುಗಾರಿಕೆ ಸಮಗ್ರ ಅಭಿವೃದ್ಧಿಗೆ ಪೂರಕ ಬಿಜೆಟನ್ನು ಮಂಡಿಸಿರುವ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿ ಯೂರಪ್ಪ ರವರಿಗೆ ಹೃತ್ಪೂರ್ವಕ ಧನ್ಯವಾದಗಳು.
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, ಮಹಿಳಾ ಸ್ವಾವಲಂಬಿ ಯೋಜನೆಗಳಿಗೆ ಗರಿಷ್ಠ ಅನುದಾನ, ಪ್ರತಿ ಜಿಲ್ಲೆಯಲ್ಲಿ ಗೋ ಶಾಲೆ ಆರಂಭ, ಅಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣ, ಕೃಷಿ, ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಯೋಜನೆಗಳ ಮೂಲಕ ಈ ಬಜೆಟ್ ಜನಸಾಮಾನ್ಯರಲ್ಲಿ ಆಶಾದಾಯಕವಾಗಿ ಮೂಡಿಬಂದಿದೆ.
 
 
 
 
 
 
 
 
 
 
 

Leave a Reply