ಉಡುಪಿ ಜಿಲ್ಲೆಯ 11e ನಕ್ಷೆ, ಹಕ್ಕುಪತ್ರ ಸಮಸ್ಯೆ ಹಾಗೂ ಸಹಕಾರ ಕ್ಷೇತ್ರದ ಬಲವರ್ಧನೆ ಬಗ್ಗೆ ಸದನದಲ್ಲಿ ಯಶ್ ಪಾಲ್ ಸುವರ್ಣ ಆಗ್ರಹ

ರಾಜ್ಯದಾದ್ಯಂತ ಹಕ್ಕುಪತ್ರದಿಂದ ವಂಚಿತರಾಗಿರುವ ಅರ್ಹ ಬಡ ಕುಟುಂಬಗಳಿಗೆ ಹಕ್ಕು ಪತ್ರ ಒದಗಿಸುವ ನಿಟ್ಟಿನಲ್ಲಿ ಈಗ ಚಾಲ್ತಿಯಲ್ಲಿರುವ 2015 ಕ್ಕಿಂತ ಪೂರ್ವದ ವಾಸಿಯಾಗಿರುವ ದಾಖಲೆಯನ್ನು ಒದಗಿಸುವ ನಿಯಮವನ್ನು 2019 ಕ್ಕೆ ಮಾರ್ಪಡಿಸಿ ಜಿಲ್ಲೆ ಹಾಗೂ ರಾಜ್ಯದ ಸಾವಿರಾರು ಅರ್ಹ ಬಡ ಕುಟುಂಬ ಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿವೇಶನದಲ್ಲಿ ಕಂದಾಯ ಸಚಿವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸುವಂತೆ ಜಿಲ್ಲಾಧಿಕಾರಿಗಳು ಹೊರಡಿಸಿರುವ 50 ಸೆಂಟ್ಸ್ ಕ್ಕಿಂತ ಕಡಿಮೆ ವಿಸ್ತೀರ್ಣದಲ್ಲಿ 11 e ನಕ್ಷೆ ಪ್ರಕ್ರಿಯೆಯನ್ನು ಕೈಬಿಟ್ಟ ಆದೇಶದಿಂದ ಜಿಲ್ಲೆಯ ಜನತೆ ತೀವ್ರ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ ತಕ್ಷಣ ಈ ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

ರಾಜ್ಯದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುವ ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರಿ ಖಾತೆಗಳನ್ನು ತೆರೆಯುವ ಮೂಲಕ ಆರ್ಥಿಕ ಸಹಕಾರ, ಪ್ರತಿ ಜಿಲ್ಲೆಯಲ್ಲಿ ಸಹಕಾರಿ ನ್ಯಾಯಾಲಯ ಸ್ಥಾಪನೆ ಹಾಗೂ ವಿಧಾನ ಪರಿಷತ್ತಿನಲ್ಲಿ 4 ಸ್ಥಾನಗಳನ್ನು ಸಹಕಾರಿ ಕ್ಷೇತ್ರದ ಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿ ಮುಂದಿನ ದಿನದಲ್ಲಿ ಸಹಕಾರ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಸರಕಾರ ಕ್ರಮವಹಿಸುವಂತೆ ಸದನದಲ್ಲಿ ಪ್ರಸ್ತಾಪಿಸಿದರು.

 
 
 
 
 
 
 
 
 
 
 

Leave a Reply