ಯಶ್ ಪಾಲ್ ಸುವರ್ಣ ನಳಿನ್ ಕುಮಾರ್ ಭೇಟಿ – ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಮಾಲೋಚನೆ

 ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಯಶ್ ಪಾಲ್ ಸುವರ್ಣ ಧನ್ಯವಾದ ಸಲ್ಲಿಸಿ ಸಂಘಟನಾತ್ಮಕ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ , ಯಶ್ ಪಾಲ್ ಸುವರ್ಣ ರನ್ನು ಸನ್ಮಾನಿಸಿ ಶುಭಹಾರೈಸಿದರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply