ಸಿದ್ದರಾಮಯ್ಯ ದೇವರಿದ್ದಂತೆ, ಅವ್ರನ್ನ ಬಿಟ್ಟು ಹೋದ್ರೆ ದೇವರಿಂದ ದೂರವಾದಂತೆ: ಜಮೀರ್

ಸಿದ್ದರಾಮಯ್ಯ ಅವರಿಂದ ದೂರವಾದರೆ ದೇವರಿಂದ ದೂರ ಆದಂತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದರು.

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯಲ್ಲಿ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರು ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕುತ್ತರಿಸಿದ ಜಮೀರ್, ಸಿದ್ದರಾಮಯ್ಯ ಜೊತೆ ಫೆ.3 ರಿಂದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸುವೆ. ಫೆ.13 ರಂದು ಯಾತ್ರೆ ಮುಗಿಯಲಿದೆ. ನಂತರ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವೆ ಎಂದರು.

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಿದ್ದಾರೆ. ಅದರಂತೆ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡುವೆ ಎಂದು ತಿಳಿಸಿದರು.

 
 
 
 
 
 
 
 
 
 
 

Leave a Reply