ಖ್ಯಾತ ಬಾಲಿವುಡ್‌ ನಟಿ ಪೂನಂ ಪಾಂಡೆ ಇನ್ನಿಲ್ಲ!

ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದ್ದ ನಟಿ ಪೂನಂ ಪಾಂಡೆ ಅವರು ಕ್ಯಾನ್ಸರ್ನಿಂದ ನಿಧನರಾದರು ಎಂಬ ಸುದ್ದಿ ಕೇಳಿಬಂದಿದೆ. ಅವರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಆದರೆ ಕೆಲವರಿಗೆ ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ. ನಿಜಕ್ಕೂ ಅವರಿಗೆ ಅನಾರೋಗ್ಯ ಉಂಟಾಗಿತ್ತಾ ಅಥವಾ ಇದು ಪ್ರಚಾರಕ್ಕಾಗಿ ಮಾಡಿದ ಗಿಮಿಕ್ ಇರಬಹುದಾ ಎಂಬ ಸಂಶಯ ಕಾಡಿದೆ. ಆ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಪೂನಂಗೆ ಕೇವಲ 32 ವರ್ಷ ವಯಸ್ಸಾಗಿತ್ತು. ನಟಿಯ ಸಾವಿನ ಸುದ್ದಿಯನ್ನು ಅವರ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯ ಪೋಸ್ಟ್‌ ಮೂಲಕ ತಿಳಿಸಲಾಗಿದೆ.

ಪೋಸ್ಟ್‌ನಲ್ಲಿ ‘ಇಂದು ನಾವು ಗರ್ಭಕಂಠದ ಕ್ಯಾನ್ಸರ್‌ನಿಂದಾಗಿ ಪೂನಮ್‌ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆ ತನ್ನ ಹತ್ತಿರ ಬರುವ ಪ್ರತಿಯೊಬ್ಬರನ್ನು ಪ್ರೀತಿಯಿಂದ ಭೇಟಿಯಾಗುತ್ತಿದ್ದರು. ಈ ದುಃಖದ ಸಮಯದಲ್ಲಿ ಅವರೊಂದಿಗೆಕ ಹಂಚಿಕೊಂಡ ಎಲ್ಲಾ ಕ್ಷಣಗಳನ್ನು ನಾವು ನೆನಪಿಸಿಕೊಳ್ಳುತ್ತಿದ್ದೇವೆ’ ಎಂದು ನಟಿಯ ಸಾವಿನ ಸುದ್ದಿಯನ್ನು ಬಹಿರಂಗ ಪಡಿಸಲಾಗಿದೆ. 

 
 
 
 
 
 
 
 
 
 
 

Leave a Reply