Janardhan Kodavoor/ Team KaravaliXpress
24.6 C
Udupi
Friday, December 2, 2022
Sathyanatha Stores Brahmavara

ಉಡುಪಿ ಅಂಚೆ ವಿಭಾಗದಿಂದ ರಾಷ್ಟ್ರೀಯ ವಿಚಕ್ಷಣಾ ಸಪ್ತಾಹ ಹಾಗು ಏಕತಾ ದಿನದ ಆಚರಣೆ:

ರಾಷ್ಟ್ರೀಯ ವಿಚಕ್ಷಣಾ ಜಾಗೃತಿ ಸಪ್ತಾಹದ ಅಂಗವಾಗಿ ಉಡುಪಿ ಅಂಚೆ ವಿಭಾಗದಿಂದ ಉಡುಪಿ ಪ್ರಧಾನ ಅಂಚೆ ಕಚೇರಿಯ ಆವರಣದಲ್ಲಿ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ರವರ ನೇತ್ರತ್ವದಲ್ಲಿ ಭ್ರಷ್ಟಾಚಾರ ನಿರ್ಮೂಲನಾ ಪ್ರತಿಜ್ಞಾ ವಿಧಿ ಹಾಗು ಏಕತಾ ದಿನದ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.

ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠಲ ಭಟ್ ಸಿಬ್ಬಂದಿಗಳಿಗೆ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞಾ‌ವಿಧಿ‌ ಬೋಧಿಸಿ ದರು. ಉಡುಪಿ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕ ಗುರು ಪ್ರಸಾದ್ ಏಕತಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಉಡುಪಿ ಪ್ರಧಾನ ಅಂಚೆ ಕಚೇರಿಯ ಸಿಬ್ಬಂದಿಗಳು, ಉಡುಪಿಅಂಚೆ ವ್ಯವಹಾರ ಕೇಂದ್ರದ ಸಿಬ್ಬಂದಿಗಳು ಹಾಗು ಉಪ ಅಂಚೆ ಕಚೇರಿಯ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!