ಉಡುಪಿ ಅಂಚೆ ವಿಭಾಗದಿಂದ ಕ್ಷಯ ಮುಕ್ತ ಭಾರತ ಅಭಿಯಾನ ,ಮಾಹಿತಿ ಶಿಬಿರ

ಯಾವುದೇ ಒಂದು ಕಾಯಿಲೆಯನ್ನು ಗುಣಪಡಿಸುವ ಬದಲು ಅದು ಬರದಂತೆ ತಡೆಗಟ್ಟುವುದು ಅತ್ಯುತ್ತಮ ವಿಧಾನ ಹಾಗಾಗಿ ಪ್ರತಿಯೊಬ್ಬರೂ ಯಾವುದೇ ಒಂದು ಕಾಯಿಲೆಯ ಬಗ್ಗೆ ತಿಳಿದುಕೊಂಡು ಅದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಉಡುಪಿ‌ ಕ್ಷಯ ಘಟಕ ,ಉಡುಪಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಪ್ರವೀಣ್ ಶೆಟ್ಟಿ ಕರೆ ನೀಡಿದರು. ಅವರು ಭಾರತೀಯ ಅಂಚೆ ಇಲಾಖೆ ಉಡುಪಿ ಅಂಚೆ ವಿಭಾಗದ ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಹಮ್ಮಿಕೊಂಡಿದ್ದ ಕ್ಷಯರೋಗ ಮುಕ್ತ ಭಾರತ ಅಭಿಯಾನದ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಎಷ್ಟೋ ಕಾಯಿಲೆಗಳು ಉಲ್ಬಣಗೊಳ್ಳುವುದು ಸಕಾಲಕ್ಕೆ ಸೂಕ್ತ ಚಿಕಿತ್ಸೆಯ ಕೊರತೆಯಿಂದಾಗಿ ಹಾಗಾಗಿ ಎಲ್ಲರೂ ಒಂದು ಕಾಯಿಲೆ ಬರಲು ನಿಜವಾದ ಕಾರಣ ಹಾಗು ಅದು ಹರಡುವ ಸಂಭವನೀತೆಯನ್ನು ಮೊದಲು ತಿಳಿದುಕೊಂಡು ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ಕಂಡುಕೊಂಡಲ್ಲಿ ಯಾವುದೇ ಕಾಯಿಲೆಗಳನ್ನು ಕೂಡ ಗುಣಪಡಿಸಲಾಗುತ್ತದೆ ಅಲ್ಲದೆ ಸಾವು ನೋವುಗಳನ್ನು ಕೂಡಾ ಗೆಲ್ಲಬಹುದು ಎಂದು ತಿಳಿ ಹೇಳಿದರು. ಈ ಮಾಹಿತಿ ಶಿಬಿರದಲ್ಲಿ ಆರೋಗ್ಯ ಇಲಾಖಾ ಕಾರ್ಯಕರ್ತೆ ಸುಮಲತಾ ಉಪಸ್ಥಿತರಿದ್ದರು. ಉಡುಪಿ ಅಂಚೆ ವಿಭಾಗದ ಆಂಚೆ ಅಧೀಕ್ಷಕರಾದ ನವೀನ್ ಚಂದ್ರರ್ ರವರು ಅಧ್ಯಕ್ಷತೆ ವಹಿಸಿದ್ದರು .ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠಲ ಭಟ್ ವಂದಿಸಿದರು. ಉಡುಪಿ ಪ್ರಧಾನ ಅಂಚೆ ಕಚೇರಿಯ ಅಂಚೆಪಾಲಕ ಗುರುಪ್ರಸಾದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply