ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ “ಸಿ”ವರ್ಗದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80,ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕ: 15-01-2021 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವಂತೆ ಫೆಡರೇಶನಿನ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply