ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಂಸ್ಕಾರಯುತ ಶಿಕ್ಷಣ ಮುಖ್ಯ~ ವಕೀಲ ಪ್ರದೀಪ್‌ಕುಮಾರ್‌

ಪೂರ್ಣಪ್ರಜ್ಞ ಕಾಲೇಜಿನ 2020-21ನೇ ಸಾಲಿನ ಬಹುಮಾನ ವಿತರಣಾ ಕಾರ್ಯಕ್ರಮ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಆತಿಥಿಯಾಗಿ ಭಾಗವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿಎಸ್.ಚಂದ್ರಶೇಖರ್‌ರವರು ನೂತನ ಶಿಕ್ಷಣ ನೀತಿ -2020ನ್ನು ಉದ್ಘಾಟಿಸಿ ಮಾತನಾಡಿ ಕಾಲೇಜು ನಡೆದು ಬಂದ ಹಾದಿ, ಸಾಧನೆಗಳನ್ನು ವಿವರಿಸುತ್ತಾ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣಕ್ಕೆ ಪ್ರಾಧಾನ್ಯತೆ ಕೊಡುವುದರ ಮೂಲಕ ಜಾಗತಿಕ ಸಾಧನೆಯತ್ತ ತನ್ನ ಗುರಿ ಸಾಧಿಸುವ ಪ್ರಯತ್ನದಲ್ಲಿದೆ, ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. 
ಕಾಲೇಜಿನ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿಯವರಾದ ಶ್ರೀ ಪ್ರದೀಪ್‌ಕುಮಾರ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಂಸ್ಕಾರಯುತ ಶಿಕ್ಷಣ ಮುಖ್ಯ. ಹೊಸ ಶಿಕ್ಷಣ ನೀತಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಾಯಕವಾಗುತ್ತದೆ ಎಂದರು.
ಕಾಲೇಜು  ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ 2019-20 ನೇ ಸಾಲಿನಲ್ಲಿ ಬಿ.ಕಾಂ., ಬಿ.ಎ., ಬಿ.ಎಸ್.ಸಿ., ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು, ಉಪಪ್ರಾಂಶುಪಾಲ ಡಾ. ಪ್ರಕಾಶ್ ರಾವ್, ಕಾಲೇಜು ಉಪನ್ಯಾಸಕ, ಉಪನ್ಯಾಸಕೇತರ, ಸಿಬ್ಬಂದಿಗಳು, ವಿದ್ಯಾರ್ಥಿಗಳು, ರಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರತಿಭಾ ಸಿ. ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ರಮೇಶ್ ಟಿ. ಎಸ್. ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ  ಉಪನ್ಯಾಸಕಿ ಜಯಲಕ್ಷ್ಮೀ ವಂದಿಸಿದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
 
 
 
 
 
 
 
 
 
 
 

Leave a Reply