Janardhan Kodavoor/ Team KaravaliXpress
29.6 C
Udupi
Saturday, July 2, 2022
Sathyanatha Stores Brahmavara

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಗಾರ

ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಗಣಿತಶಾಸ್ತ್ರ ವಿಭಾಗದ ವತಿಯಿಂದ (9/5/2022 to 13/5/2022) 5 ದಿನಗಳ ಪರ್ಯಂತ ನಡೆದ ಗಣಿತ ಪೂರ್ಣ ಎಂಬ ಗಣಿತಶಾಸ್ತ್ರ ಕಾರ್ಯಗಾರದ ಸಮಾರೋಪ ಸಮಾರಂಭ ಮೇ 13 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಅದಮಾರು ಮಠ ಎಜುಕೇಷನ್ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ ಗಣಿತಶಾಸ್ತ್ರದ ಕಾರ್ಯಾಗಾರಗಳು ಸಣ್ಣ ತರಗತಿಯ ಮಕ್ಕಳಿಗೂ ಸಿಗುವಂತಾಗಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 40 ಮಂದಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಿ.ಐ.ಟಿ ಗುಬ್ಬಿಯ ನಿವೃತ್ತ ಪ್ರಾಧ್ಯಾಪಕರಾದ ಡಾ. ಪ್ರದೀಪ್ ಸಿ. ಆರ್, ಶಿವ ನಾಡರ್ ಯೂನಿವರ್ಸಿಟಿಯ ಪ್ರಾಧ್ಯಾಪಕರಾದ ಡಾ. ಎ. ಸತ್ಯನಾರಾಯಣ ರೆಡ್ಡಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಘವೇಂದ್ರ ಎ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಉಪನ್ಯಾಸಕರಾದ ಶ್ರೀಮತಿ ಗೀತಾಂಜಲಿಯವರು ಸ್ವಾಗತಿಸಿ, ಶ್ರೀ ನಿತೀಶ್ ವಂದಿಸಿದರು. ಕುಮಾರಿ ದಿವ್ಯ ಕಾರ್ಯಕ್ರಮ ನಿರೂಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!