ಮಾನವ ಗುರುತಿಸಿಕೊಳ್ಳಬೇಕಾಗಿದ್ದು ಅಂತರoಗದ ಸೌಂದರ್ಯದಿoದ ~ಶ್ರೀ ಈಶಪ್ರಿಯತೀರ್ಥ ಶ್ರೀಪಾದರು

ಉಡುಪಿ : ಆಧುನಿಕ ಯುಗದಲ್ಲಿ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಗೆ ವಿಪುಲ ಅವಕಾಶಗಳಿವೆ. ವಿದ್ಯಾರ್ಥಿಗಳು ಅಂತರoಗದ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಯವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿರುವ ಪರಮಪೂಜ್ಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು
ಆಶೀರ್ವಚನ ನೀಡಿದರು.
ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ೨೦೨೩- ೨೪ನೇ ಸಾಲಿನ ‘ವಿದ್ಯಾರ್ಥಿ ಸಂಘ’ ಹಾಗೂ ‘ಫೈನ್ ಆರ್ಟ್ಸ್ ಲ್ಯಾಬ್’ ಅನ್ನು ಉದ್ಘಾಟಿಸಿ
ಅವರು ಮಾತನಾಡಿದರು.
ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಕಾಳಾವರ ಶ್ರೀ ವರದರಾಜ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್ ಮಾತನಾಡುತ್ತ, ವಿದ್ಯಾರ್ಥಿಗಳು ಸೋಲಿಗೆ ಭಯಪಡಬಾರದು. ನಿರಂತರ ಪ್ರಯತ್ನದಿಂದ ಮಾತ್ರವೇ ಯಶಸ್ಸು ಲಭ್ಯವಾಗುತ್ತದೆ ಎಂದರು. ಕಲಾಕಾರರಾದ ದೃಢವ್ರತ ಗೋರಿಕ್, ಕಲಾಭಿರುಚಿಯನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು. ಪ್ರಾಚಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿಯಾಗಿರುವ ಪುರುಷೋತ್ತಮ ಅಡ್ವೆ, ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ. ಎಸ್. ಚಂದ್ರಶೇಖರ್, ಪ್ರಾಂಶುಪಾಲರಾದ ಡಾ. ರಾಮು ಎಲ್. ವಿದ್ಯಾರ್ಥಿ ಕ್ಷೇಮಪಾಲನಾ ವಿಶೇಷ ಅಧಿಕಾರಿ ಶ್ರೀಮತಿ ವಸಂತ ರವಿಪ್ರಕಾಶ್, ಅಧಿಕಾರಿಗಳಾದ ಡಾ. ರಮೇಶ್ ಟಿ. ಎಸ್, ಶ್ರೀಮತಿ ಜಯಲಕ್ಷಿö್ಮ
ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾನುಷ್ ಎಂ. ಕೋಟ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಅಮೃತ ಭಟ್ ಅತಿಥಿಗಳನ್ನು ಪರಿಚಯಿಸಿ, ನಿಕ್ಷಿತಾ ವಂದಿಸಿದರು. ಶ್ರದ್ಧಾ ನಿರೂಪಿಸಿದರು.
 
 
 
 
 
 
 
 
 
 
 

Leave a Reply