ಪ್ರಮೀಳಾ ಜೆ.ವಾಜ್ ಅವರಿಗೆ ಪಿಹೆಚ್.ಡಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಸಮಾಜಕಾರ್ಯ ಸ್ನಾತಕೋತ್ತರ ವಿಬಾಗದ ಉಪನ್ಯಾಸಕಿ ಪ್ರಮೀಳಾ ಜೆ.ವಾಜ್ ಅವರು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗಕ್ಕೆ ಸಲ್ಲಿಸಿದ “ಮಕ್ಕಳ ರಕ್ಷಣಾ ವ್ಯವಸ್ಥೆ ಮತ್ತು ಮಕ್ಕಳ ಅಭಿವೃದ್ಧಿ” ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ ಪದವಿ ಪಡೆದಿದ್ದಾರೆ. ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಅವರ ಮಾರ್ಗದರ್ಶನದಲ್ಲಿ ಪ್ರಬಂಧವನ್ನು ಸಿದ್ಧಪಡಿಸಿದ್ದರು. ಅದೇ ವಿ.ವಿ.ಯಲ್ಲಿ ಈ ಹಿಂದೆ ಎಂ.ಫಿಲ್. ಪದವಿಯನ್ನು ಮುಗಿಸಿರುವ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಹಾಗೂ ಕೋಟಪಡುಕೆರೆಗಳಲ್ಲಿ ಉಪನ್ಯಾಸಕಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರಿಗೆ ವಿವಿಧ ಎನ್.ಜಿ.ಒ.ಗಳಲ್ಲಿ ಸೇವೆ ಸಲ್ಲಿಸಿರುವ ಅನುಭವವಿದೆ.

 
 
 
 
 
 
 
 
 
 
 

Leave a Reply