ಕಳೆದ ಎರಡು ತಿಂಗಳಿನಿಂದ ಶ್ರೀರಾಮಸೇನೆಯ ಸಂಸ್ಥಾಪಕ ಶ್ರೀ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಚುನಾವಣಾ ದೃಷ್ಟಿಯಿಂದ ಸುತ್ತಾಟ ಮಾಡುತ್ತಿರುವುದು ರಾಜಕೀಯ ಪಕ್ಷಗಳಲ್ಲಿ ಸಂಚಲನ ಉಂಟುಮಾಡಿದರೆ, ಉಡುಪಿ ಜಿಲ್ಲಾ ಹಾಗೂ ಕಾರ್ಕಳ ತಾಲೂಕು ಶ್ರೀರಾಮಸೇನೆ ಮೌನ ವಹಿಸಿರುವುದು ಕಾರ್ಯಕರ್ತರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಇಷ್ಟೆಲ್ಲ ಸುತ್ತಾಡುತ್ತಿರುವ ಮುತಾಲಿಕ್ ರವರೊಂದಿಗೆ ಶ್ರೀರಾಮ ಸೇನೆಯ ವಿಭಾಗ ಜಿಲ್ಲಾ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸದಿರುವುದು ಜನರಲ್ಲಿ ಗೊಂದಲವನ್ನು ಉಂಟು ಮಾಡಿದೆ. ಒಂದು ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ರವರು ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಿದರೆ, ಶ್ರೀರಾಮ ಸೇನೆಯ ಈ ಮೌನ ಮುಂದೆ ತೊಡಕಾಗಬಹುದೆಂದು ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿದೆ. ಹೆಬ್ರಿ ಹಾಗೂ ಕಾರ್ಕಳ ತಾಲೂಕಿನಲ್ಲಿ ಶ್ರೀರಾಮ ಸೇನೆಯ ಸಾವಿರಾರು ಕಾರ್ಯಕರ್ತರು ಇರುವುದರಿಂದ ಸಂಘಟನೆಯ ಮೌನ ಮುಂದಿನ ಮಾತ್ರ ಬೆಳವಣಿಗೆಗೆ ಕಾರಣವಾಗಬಹುದೇ?
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.