ವೀರಯೋಧ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ರಾಷ್ಟ್ರ ರಕ್ಷಣೆಯ ಪುಣ್ಯಕಾರ್ಯದಲ್ಲಿ ಹುತಾತ್ಮ

ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು.

ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ  ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್​​ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. 

ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು.

ಎರಡು ವರ್ಷಗಳ ಹಿಂದೆಯಷ್ಟೇಪ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಾಂಜಲ್ ಓದಿದ್ದ ಎಂಆರ್​ಪಿಎಲ್ ಡೆಲ್ಲಿ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಯೋಧರನ್ನು ಆಸ್ಪತ್ರೆಗೆ ದಾಖಲಿಸ ಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ.

 
 
 
 
 
 
 
 
 
 
 

Leave a Reply