ಕಳತ್ತೂರಿನಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ.

ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಕಳತ್ತೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟು೦ಬ ಕಲ್ಯಾಣ ಇಲಾಖೆ- ಅ೦ಧತ್ವ ನಿವಾರಣಾ ವಿಭಾಗ ಇವರ ಜ೦ಟಿ ಆಶ್ರಯದಲ್ಲಿ, ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇ೦ಟರ್‌ನ್ಯಾಷನಲ್ ಆಡಿಟೊರಿಯಮ್‌ನಲ್ಲಿ, ನೇತ್ರ ಉಚಿತ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ  ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರವು ನಡೆಯಿತು.

ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಶಿಬಿರವನ್ನು ಉದ್ಘಾಟಿಸಿ, ಕಣ್ಣಿನ ವಿವಿಧ ಬಗೆಯ ತೊ೦ದರೆಗಳು, ನೇತ್ರ ರಕ್ಷಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶೇಖರ ಬಿ. ಶೆಟ್ಟಿ ವಹಿಸಿದ್ದರು. ಉಡುಪಿಯ ನ್ಯಾಯವಾದಿ ಶ್ರೀ ಉಮೇಶ್ ಶೆಟ್ಟಿ ಕಳತ್ತೂರು, ಶ್ರೀ ದಿವಾಕರ ಶೆಟ್ಟಿ, ಶ್ರೀಮತಿ ಜಯಲಕ್ಷಿ÷್ಮ ಆಳ್ವ, ಶ್ರೀ ವಾಸು ಶೆಟ್ಟಿ, ಶ್ರೀ ರಾಘವೇ೦ದ್ರ ಭಟ್, ಶ್ರೀ ಮಹಮ್ಮದ್ ಫಾರೂಕ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ 124 ಜನರ ನೇತ್ರ ತಪಾಸಣೆ ನಡೆಸಲಾಯಿತು, 14 ಜನರನ್ನು ಉಚಿತ ಶಸ್ತ್ರಚಿಕಿತ್ಸೆಗೆ ಗುರುತಿಸಲಾಯಿತು, 49 ಜನರನ್ನು ಉಚಿತ ಕನ್ನಡಕ ವಿತರಣೆಗೆ ಆಯ್ಕೆ ಮಾಡಲಾಯಿತು.

 
 
 
 
 
 
 
 
 
 
 

Leave a Reply