ಜೂ.24ರಂದು ನೂತನ ಕ್ರಿಮಿನಲ್ ಕಾನೂನುಗಳ ಕುರಿತು ಸಂವಾದ

ಜೂ.22: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ನೂತನ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮವನ್ನು ಜೂ.24ರಂದು ಬೆಳಗ್ಗೆ 11ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಹಾಗೂ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ.ರವೀಂದ್ರನಾಥ್ ಶಾನುಭೋಗ್ ವಿಚಾರ ಮಂಡಿಸಲಿದ್ದಾರೆ.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು. ಮುಖ್ಯ ಅತಿಥಿಯಾಗಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 
 
 
 
 
 
 
 

Leave a Reply