ಪತ್ರಕರ್ತರ ಸಂಘದ ವತಿಯಿಂದ ಮಾಧ್ಯಮ ಸಂವಾದ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಭಾಗವಹಿಸಲಿದ್ದಾರೆ.

ಜ.29ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು ಎಂದು ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

 
 
 
 
 
 
 
 
 
 
 

Leave a Reply