ರಜತ ಮಹೋತ್ಸವ ಮನವಿಪತ್ರ ಬಿಡುಗಡೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಮನವಿ ಪತ್ರವನ್ನು ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಆಚರಿಸುತ್ತಿದ್ದು, ಕಾರ್ಯಕ್ರಮದಂಗವಾಗಿ ಜಿಲ್ಲೆಯಾದ್ಯಂತ ವಿವಿಧ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

ಮುಖ್ಯವಾಗಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ, ಕಟ್ಟಡ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ ಸುಮಾರು 2 ಕೋ. ರೂ.ಗಳ ಯೋಜನೆ ರೂಪಿಸಲಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ| ಹೆಗ್ಗಡೆ ಪೂರ್ಣ ಸಹಕಾರದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಸದಸ್ಯ ಪುಂಡಲೀಕ ಮರಾಠೆ ಇದ್ದರು.

 
 
 
 
 
 
 
 
 
 
 

Leave a Reply