ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ : ಹೊಸ ದಿನಾಂಕ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಿದೆ. ಪರೀಕ್ಷಾ ದಿನಾಂಕದ ಹೊಸ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

 

 ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಗಳು ಒಟ್ಟಿಗೆ ಬಂದ ಕಾರಣ ದಿನಾಂಕ ಬದಲಾವಣೆ ಮಾಡಲಾಗಿದೆ. ಹೊಸ ದಿನಾಂಕದ ಪ್ರಕಾರ ಏಪ್ರಿಲ್ 22 ರಿಂದ ಮೇ 11ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ.

 

ಇನ್ನು ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರ ವರೆಗೆ ಅವಕಾಶ ನೀಡಲಾಗಿದೆ. ಈ ಹಿಂದೆ ಪರೀಕ್ಷಾ ದಿನಾಂಕವನ್ನು ಏಪ್ರಿಲ್ 16 ರಿಂದ ಮೇ 6 ವರೆಗೆ ನಿಗದಿ ಮಾಡಲಾಗಿತ್ತು.

 

 

ಹೊಸ ತಾತ್ಕಾಲಿಕ ವೇಳಾಪಟ್ಟಿ ಈ ಕೆಳಗಿನಂತಿವೆ :

ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಏ. 23 – ಹಿಂದಿ

ಏ. 25 – ಅರ್ಥಶಾಸ್ತ್ರ

ಏ. 26 – ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಾಸಾಯನ ಶಾಸ್ತ್ರ

ಏ. 27 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಏ. 28 – ಕನ್ನಡ, ಅರೆಬಿಕ್

ಏ. 30 – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

ಮೇ 2 – ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 4 – ಇಂಗ್ಲಿಷ್

ಮೇ 5 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

ಮೇ 6 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲಗಣಿತ

ಮೇ 7 – ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮೇ 9 – ಇತಿಹಾಸ, ಭೌತಶಾಸ್ತ್ರ

ಮೇ 11 – ರಾಜ್ಯಶಾಸ್ತ್ರ ಸಂಖ್ಯಾಶಾಸ್ತ್ರ

 
 
 
 
 
 
 
 
 
 
 

Leave a Reply