ಆಹಾರ ಮನುಷ್ಯನ ಜೀವನಕ್ಕೆ ಅತ್ಯಮೂಲ್ಯ- ಪುನರೂರು

ಆಹಾರ ಮನುಷ್ಯನ ಜೀವನಕ್ಕೆ ಅತ್ಯಮೂಲ್ಯವಾಗಿದ್ದರೂ, ಇಂದಿಗೂ ಲಕ್ಷಾಂತರ ಜನರು ಹಸಿವಿನಿಂದ ಅಥವಾ ಅರೆಹೊಟ್ಟೆಯಿಂದ ನರಳುತ್ತಿದ್ದಾರೆ. ಇದಕ್ಕೆ ಕಾರಣ, ಉಳಿದವರು ಮಾಡುತ್ತಿರುವ ಆಹಾರದ ಪೋಲು ಎಂದರೆ ತಪ್ಪಾಗಲಾರದು. ನಾವು ಪ್ರತಿನಿತ್ಯ ಹಾಳು ಮಾಡುವ ಆಹಾರ, ಮತ್ತೊಬ್ಬರ ವ್ಯಕ್ತಿಯ ಹೊಟ್ಟೆ ತುಂಬಿಸಬಹುದು ಎಂಬುದನ್ನು ಎಂದಿಗೂ ಮರೆಯಬಾರದು.

ಇದನ್ನು ಕಡಿಮೆಮಾಡಲು, ಆಹಾರದ ಮಹತ್ವದ ಕುರಿತು ಅರಿವು ಮೂಡಿಸುವುದೇ ಈ ದಿನದ ಉದ್ದೇಶವಾಗಿದೆ ಎಂದು ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಪುನರೂರು ಪ್ರತಿಷ್ಠಾನ(ರಿ) ಇದರ ಆಶ್ರಯದಲ್ಲಿ ಜನವಿಕಾಸ ಸಮಿತಿ ಮೂಲ್ಕಿ ಇದರ ಸಹಕಾರದಲ್ಲಿ ವಿಶ್ವ ಆಹಾರ ದಿನಾಚರಣೆಯ ಅಂಗವಾಗಿ ಆಹಾರದ ಅಪವ್ಯಯವನ್ನು ತಡೆಗಟ್ಟುವ ಉದ್ದೇಶದಿಂದ ಹಮ್ಮಿಕೊಂಡಲಾದ ಆಹಾರ ಜಾಗೃತಿ ಅಭಿಯಾನ-2021 ಹಾಗೂ ಆಹಾರ ಪೂರೈಸುವ ರೈತನ ಪ್ರಾಮುಖ್ಯತೆಯನ್ನು ಜನರಿಗೆ ತಿಳಿಸುವುದ ರೊಂದಿಗೆ ದೇಶದ ಬೆನ್ನೆಲುಬು ಆಗಿರುವ ಪ್ರಗತಿಪರ ರೈತರೊಬ್ಬರಿಗೆ ಸನ್ಮಾನಿಸುವ ಸಲುವಾಗಿ ಕಿಲ್ಪಾಡಿ ಗ್ರಾಮದ ಕೆಂಚನಕೆರೆಯ ‘ಪ್ರಕೃತಿ’ ಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಲಕ್ಷ್ಮಿನಾರಾಯಣ ಅಸ್ರಣ್ಣರು ಮಾತನಾಡಿ ಪ್ರತೀವರ್ಷ ಆಹಾರ ದಿನಾಚರಣೆಯ ಅಂಗವಾಗಿ ನಮಗೆಲ್ಲರಿಗೂ ಜೀವಿಸಲು ಅತೀ ಅಗತ್ಯ ಬೇಕಾಗಿರುವ ಆಹಾರವನ್ನು ಉತ್ಪಾದಿಸುವ ರೈತರನ್ನು ಪ್ರೋತ್ಸಾಹಿಸಿ ಅವರ ಸ್ವಗೃಹದಲ್ಲೇ ಗೌರವಿಸುವುದು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಕೆನ್ಯೂಟ್ ಅರಾಹ್ನ ರಿಗೆ ಕೃಷಿ ರತ್ನ – 2021 ಎಂಬ ಬಿರುದಾಂಕಿತದೊಂದಿಗೆ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ದ.ಕ.ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಹಿಲ್ದಾ ಡಿಸೋಜ, ಪುನರೂರು ಪ್ರತಿಷ್ಠಾನ(ರಿ) ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಕೃಷಿ ಅಧಿಕಾರಿ ಅಬ್ದುಲ್ ಬಶೀರ್, ಜನ ವಿಕಾಸ ಸಮಿತಿ ಅಧ್ಯಕ್ಷ ಪ್ರಾಣೇಶ್ ಭಟ್ ದೇಂದಡ್ಕ, ಉಪಸ್ಥಿತರಿದ್ದರು.

ಪುನರೂರು ಪ್ರತಿಷ್ಠಾನ(ರಿ)ದ ಅಧ್ಯಕ್ಷ ದೇವಪ್ರಸಾದ್ ಪುನರೂರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ದಾಮೋದರ ಶೆಟ್ಟಿ ಕೊಡೆತ್ತೂರು ವಂದಿಸಿದರು, ಜಿತೇಂದ್ರ ವಿ ರಾವ್ ಹೆಜಮಾಡಿ ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply