Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ಪುತ್ತಿಗೆ ಶ್ರೀಗಳಿಗೆ ತುಲಾಭಾರ

ಶ್ರೀ ಪುತ್ತಿಗೆ ಮಠದ ಶಾಖೆ, ನವ ವೃಂದಾವನ ಸೇವಾ ಪ್ರತಿಷ್ಠಾನ ರಿ. ಶ್ರೀ ರಾಘವೇಂದ್ರ ಸ್ವಾಮಿ ಮಠ ಕುಳಾಯಿ ಹೊಸಬೆಟ್ಟು ಇದರ ಸಂಸ್ಥಾಪನಾ ರಜತ ಮಹೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮದ ಸಮಾರಂಭವನ್ನು ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ , ಸಮಾರಂಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಭರತ್ ಶೆಟ್ಟಿ

ಗಣ್ಯರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು, ಶ್ರೀ ಶರವು ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ರಾಘವೇಂದ್ರ ಶಾಸ್ತ್ರಿ, ಜ್ಯೋತಿಷಿ ನಾಗೇಂದ್ರ ಭಾರದ್ವಾಜ್, ಶ್ರೀ ವರುಣ್ ಚೌಟ , ಶ್ರೀ ಮಠದ ರಾಘವೇಂದ್ರ ಎಚ್ ವಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಜತಮಹೋತ್ಸವ ಸಮಿತಿಯ ವತಿಯಿಂದ ಪರಮಪೂಜ್ಯ ಶ್ರೀಪಾದರ ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ಗಣ್ಯರ ಸಮ್ಮುಖದಲ್ಲಿ ತುಲಾಭಾರ ನೆರವೇರಿತು

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!