ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್ ಡಯಾಸ್ ನಿಧನ

ಉಡುಪಿ: ಭಾರತೀಯ ಭೂಸೇನೆಯ ನಿವೃತ್ತ ಯೋಧ, ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್ ಎಲ್ ಡಯಾಸ್ (88) ಬುಧವಾರ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಆರ್ ಎಲ್ ಡಯಾಸ್ ಹಿಂದಿನ ಎರಡು ದಶಕಗಳಿಂದ ಉಡುಪಿ ರೈಲ್ವೆ ಯಾತ್ರಿ ಸಂಘದ ಪದಾಧಿಕಾರಿ ಹಾಗೂ ಅಧ್ಯಕ್ಷರಾಗಿದ್ದು ಉಡುಪಿ ಭಾಗದ ರೈಲ್ವೆ ಸೇರಿದಂತೆ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಿ ಕೆಲಸ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.ಸಂಘದ ನೇತೃತ್ವದಲ್ಲಿ ಸಂಘಟಿತ ಹೋರಾಟದಿಂದ ಉಡುಪಿ ಭಾಗದಲ್ಲಿ ಹಲವಾರು ರೈಲ್ವೆ ಯೋಜನೆಗಳು ಜಾರಿಗೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ರೈಲ್ವೆ ಕ್ಷೇತ್ರ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲೂ ಡಯಾಸ್ ರವರ ಸಾಮಾಜಿಕ ಕಳಕಳಿ ನಿರಂತರವಾಗಿದ್ದು ಪರ್ಕಳ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಸ್ಪಂದಿನೆ ಉಡುಪಿಯಲ್ಲಿ ನರ್ಮ್ ಬಸ್ ಓಡಾಟದ ಹಿಂದೆ ಸತತ ಪ್ರಯತ್ನವಿದ್ದು ಇಂದಿಗೂ ಜನರು ಅವರನ್ನು ಸ್ಮರಿಸುವಂತೆ ಮಾಡಿದೆ.

ಡಯಾಸ್ ರವರು ಪತ್ನಿ, ನಾಲ್ವರು ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಮಣಿಪಾಲ ಕ್ರೈಸ್ಟ್ ಚರ್ಚ್ ನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply