ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಇಂದು ದಿನಾಂಕ 18-04-2022 ರಂದು ಶಾಸಕರಾದ ಕೆ. ರಘುಪತಿ ಭಟ್ ಅವರು ಪಾಲ್ಗೊಂಡು ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರುಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕಿಶೋರ್ ಕುಮಾರ್, ಸುಮಾ ನಾಯ್ಕ್, ಮಾಲತಿ ಸುಧಾಕರ್, ಯೋಗೀಶ್ ಚಂದ್ರಾಧರ್, ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯರಾದ ಧರ್ಮೇಂದ್ರ, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರರಾದ ಹರೀಶ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಭಟ್, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply