Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ಕಡಿಯಾಳಿ ವಾರ್ಡಿನ ವಿಷ್ಣು ಸೇಲ್ಸ್ ಬಳಿ ಒಳಚರಂಡಿ ಸಮಸ್ಯೆ

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಕಡಿಯಾಳಿ ವಾರ್ಡಿನ ವಿಷ್ಣು ಸೇಲ್ಸ್ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳೀಯ ಮನವಿಯಂತೆ ಇಂದು ದಿನಾಂಕ 18-04-2022 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕರು ಮಳೆ ಆರಂಭವಾಗುವ ಮುನ್ನವೇ ಶ್ರೀಘ್ರದಲ್ಲಿ ಒಳಚರಂಡಿಗಳು ಸಂಪರ್ಕಿಸುವ ಮುಖ್ಯ ತೋಡಿನ ಹೂಳೆತ್ತುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರಸಭಾ ಸದಸ್ಯರಾದ ಗೀತಾ ಶೇಟ್, ಗಿರೀಶ್ ಅಂಚನ್, ಸಂತೋಷ್ ಜತ್ತನ್ ಹಾಗೂ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!