ಶಾಸಕ ರಘುಪತಿ ಭಟ್ ನಿವಾಸದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ – ಸಂವಾದ – ಉಪಹಾರ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಎಸ್.ಟಿ ಮೋರ್ಚಾ ಉಡುಪಿ ನಗರ ಇದರ ಸಹಭಾಗಿತ್ವದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ 2022ನೇ ಸಾಲಿನಲ್ಲಿ ನಗರ ಮಂಡಲ ವ್ಯಾಪ್ತಿಯ ಶಾಲೆಗಳಲ್ಲಿ ಎಸ್.ಎಸ್.ಎಲ್. ಸಿ. ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ಇಂದು ದಿನಾಂಕ 12-06-2022 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಸ್ವಗೃಹದಲ್ಲಿ ನಡೆಯಿತು.

ಶಾಸಕರಾದ ಕೆ. ರಘುಪತಿ ಭಟ್ ರವರು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದನೆ ಸಲ್ಲಿಸಿ ಬಳಿಕ ಅವರೊಂದಿಗೆ ಉಪಹಾರ ಸವಿಯುತ್ತಾ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ನಿತ್ಯಾನಂದ ನಾಯ್ಕ್, ನಗರ ಎಸ್.ಸಿ ಮೋರ್ಚಾ ಅಧ್ಯಕ್ಷರಾದ ಅಶೋಕ್ ನಾಯ್ಕ್, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ನಗರ ಸಭಾ ಸದಸ್ಯರಾದ ಗಿರಿಧರ್ ಆಚಾರ್ಯ, ಭಾರತಿ ಪ್ರಶಾಂತ್, ವಿಜಯಲಕ್ಷ್ಮಿ, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯರಾದ ಸುಬೇದಾ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಕಾರ್ಯದರ್ಶಿಗಳಾದ ಆನಂದ್ ಮಠದಬೆಟ್ಟು, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply