ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ – ಪೂರ್ವ ತಯಾರಿ ಬಗ್ಗೆ ಶಾಸಕ ರಘುಪತಿ ಭಟ್ ಸಭೆ

ಕರ್ನಾಟಕ ರಾಜ್ಯ ಸರಕಾರದ ಕಂದಾಯ ಸಚಿವರಾದ ಆರ್. ಅಶೋಕ್ ಅವರು ದಿನಾಂಕ 19-02-2022 ರಂದು ಆರೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದು, ಬಳಿಕ ಕೊಕ್ಕರ್ಣೆ ಹಾಗೂ ಕಳ್ತೂರು ಗ್ರಾಮಕ್ಕೆ ಭೇಟಿ ನೀಡಲಿರುವುದರಿಂದ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳು ಹಾಗೂ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಇಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆಯ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಸಿ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಸಹಾಯಕ ಆಯುಕ್ತರಾದ ರಾಜು ಕೆ, ಬ್ರಹ್ಮಾವರದ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಪೋಲಿಸ್ ಉಪ ನಿರೀಕ್ಷಕರಾದ ಗುರುನಾಥ್ ಹಾದಿಮನೆ ಮತ್ತು ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಕೊಕ್ಕರ್ಣೆ, ಕಳ್ತೂರು, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply